SHIVAMOGGA LIVE NEWS |10 JANUARY 2023
ಶಿವಮೊಗ್ಗ : ನಗರದ ರಾಗಿಗುಡ್ಡದಲ್ಲಿ (ragigudda) ಬೆಂಕಿ ಕಾಣಿಸಿಕೊಂಡಿದೆ. ವಸತಿ ಶಾಲೆ (residential school) ಸಮೀಪ ಬೆಂಕಿ ಹೊತ್ತಿಕೊಂಡಿದ್ದು, ಹೊಗೆ ಆವರಿಸಿತ್ತು. ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದರು.

ಮಧ್ಯಾಹ್ನದ ವೇಳೆಗೆ ರಾಗಿಗುಡ್ಡದಲ್ಲಿ (ragigudda) ಬೆಂಕಿ ಕಾಣಿಸಿಕೊಂಡಿದೆ. ಒಣಗಿ ಬಿದ್ದಿದ್ದ ರೆಂಬೆಗಳು, ಎಲೆಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ ಶಾಲೆ ಸಿಬ್ಬಂದಿ ಮತ್ತು ಸ್ಥಳೀಯರು ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದರು.

ಕೂಡಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ರಾಗಿಗುಡ್ಡದಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ – ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್
[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]





