SHIVAMOGGA LIVE NEWS | 11 JANUARY 2023
ಬೆಂಗಳೂರು : ಶಿವಮೊಗ್ಗದಲ್ಲಿ ಬಾಂಬ್ ಟ್ರಾಯಲ್ ಬ್ಲಾಸ್ಟ್ (trail blast) ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದೆ. ಟ್ರಯಲ್ ಬ್ಲಾಸ್ಟ್ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಈ ತನಿಖೆ ನಡೆಸುತ್ತಿದೆ.
ಮಂಗಳೂರಿನ ಮಾಜಿನ್ ಅಬ್ದುಲ್ ರೆಹಮಾನ್, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ನದೀಮ್ ಅಹಮದ್ ಎಂಬುವವರನ್ನು ಬಂಧಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ, ಕಿಮ್ಮನೆ ಕಚೇರಿಗೂ ಭೇಟಿ
ಬಂಧನಕ್ಕೆ ಎನ್ಐಎ ಕೊಟ್ಟ ಕಾರಣಗಳೇನು?
ಬಂಧಿತರು ಶಂಕಿತರಾದ ಮಾಜ್ ಮುನೀರ್ ಮತ್ತು ಸಯ್ಯದ್ ಯಾಸೀನ್ ಸಂಪರ್ಕದಲ್ಲಿದ್ದರು. ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎಂದು ಎನ್ಐಎ ಪ್ರಕಟಣೆಯಲ್ಲಿ ತಿಳಿಸಿದೆ. ಇದೇ ಪ್ರಕರಣ ಸಂಬಂಧ ಈ ಹಿಂದೆ ನಾಲ್ವರನ್ನ ಬಂಧಿಸಲಾಗಿದೆ. (trail blast)