ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JANUARY 2023
SORABA : ಶಾಲೆಗೆ ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಎದೆನೋವು ಕಾಣಿಸಿಕೊಂಡು ಮನೆಯಲ್ಲಿ ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೃದಯಾಘಾತದಿಂದ (Heart Attack) ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.
ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮದ ಭತ್ತದ ವ್ಯಾಪಾರಿ ರಜತಾದ್ರಯ್ಯ ಅವರ ಮಗ ಆರ್.ಹೆಚ್.ಜಯಂತ್ (16) ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಇದನ್ನೂ ಓದಿ – ಶಿವಮೊಗ್ಗ ಸರ್ಜಿ ಮಕ್ಕಳ ಆಸ್ಪತ್ರೆಯ ಖ್ಯಾತ ತಜ್ಞ ವೈದ್ಯ ನಿಧನ, ಆಸ್ಪತ್ರೆ ಬಳಿ ಅಂತಿಮ ನಮನ
ಶಾಲೆಗೆ ಹೊರಡಲು ಜಯಂತ್ ಸಿದ್ಧತೆ ಮಾಡಿಕೊಳ್ಳುತ್ತಿದ್ದ. ಈ ವೇಳೆ ಎದು ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಪರಿಶೀಲನೆ ನಡೆಸಿದ ವೈದ್ಯರು ಆತನ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



