ಆನವೇರಿಯಿಂದ ಬಸ್ಸಲ್ಲಿ ಬಂದು ಶಿವಮೊಗ್ಗ ಗುರುಪುರದ ಬಳಿ ತನ್ನ ಬ್ಯಾಗ್ ಪರಿಶೀಲಿಸಿದ ವ್ಯಕ್ತಿಗೆ ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 JANUARY 2023

SHIMOGA : ಬಂಗಾರದ ಆಭರಣಗಳನ್ನು ರಿಪೇರಿ ಮಾಡಿಸಲು ಶಿವಮೊಗ್ಗದ ಗಾಂಧಿ ಬಜಾರ್ ಗೆ ಬಸ್ಸಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಬ್ಯಾಗಿನಲ್ಲಿದ್ದ ಎರಡು ಪರ್ಸ್ (purse) ಕಳ್ಳತನವಾಗಿದೆ. ಅವುಗಳಲ್ಲಿ ಇದ್ದ ನಗದು ಮತ್ತು ಆಭರಣ ಕಳುವಾಗಿದೆ ಎಂದು ದೂರಲಾಗಿದೆ.

Shimoga Live News update 3 million views

ಭದ್ರಾವತಿ ತಾಲೂಕು ಆನವೇರಿಯ ನಾಗರಾಜ್ ರಾಯ್ಕರ್ ಎಂಬುವವರ ಬ್ಯಾಗಿನಲ್ಲಿದ್ದ ಪಾರ್ಸ್ (purse) ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.

ನಾಗರಾಜ್ ರಾಯ್ಕರ್ ಅವರ ಗ್ರಾಹಕರು ಕೊಟ್ಟಿದ್ದ ಒಡವೆಗಳನ್ನು ಒಂದು ಪರ್ಸಿನಲ್ಲಿಟ್ಟುಕೊಂಡಿದ್ದರು. ಮತ್ತೊಂದು ಪರ್ಸಿನಲ್ಲಿ 80 ಸಾವಿರ ರೂ. ನಗದು ಇಟ್ಟಿದ್ದರು. ಎರಡು ಪರ್ಸುಗಳನ್ನು ಬ್ಯಾಗಿನಲ್ಲಿ ಇಟ್ಟುಕೊಂಡು ಶಿವಮೊಗ್ಗದ ಗಾಂಧಿ ಬಜಾರ್ ಗೆ ಬಸ್ಸಿನಲ್ಲಿ ತೆರಳುತ್ತಿದ್ದರು. ಗುರುಪುರದ ಬಳಿ ತಮ್ಮ ಪರಿಚಯಸ್ಥರ ಬಳಿ ಕೆಲಸವಿದ್ದರಿಂದ ಅಲ್ಲಿ ಬಂದು ಬ್ಯಾಗ್ ಪರಿಶೀಲಿಸಿದ್ದಾರೆ. ಆಗ ಎರಡು ಪರ್ಸುಗಳು ಇರಲಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ – ಲಾಯರ್ ಹೆಸರಲ್ಲಿ ವಿಶ್ವವಿದ್ಯಾಲಯಕ್ಕೆ ಆರ್.ಟಿ.ಐ ಅರ್ಜಿ, ಹಿಂಬರಹದಿಂದ ಹೊರಬಿತ್ತು ಅಸಲಿ ವಿಚಾರ

ರಿಪೇರಿ ಮತ್ತು ಪಾಲಿಶ್ ಮಾಡಿಸಿಲು ಕೊಟ್ಟಿದ್ದ ಸುಮಾರು 2.70 ಲಕ್ಷ ರೂ. ಮೌಲ್ಯದ 49 ಗ್ರಾಂ ಆಭರಣ, 80 ಸಾವಿರ ರೂ. ನಗದು ಕಳ್ಳತನವಾಗಿದೆ ಎಂದ ನಾಗರಾಜ್ ರಾಯ್ಕರ್ ದೂರಿನಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sidgandur Temple Jathre

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 13, 2023

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

Leave a Comment