SHIVAMOGGA LIVE NEWS | 20 JANUARY 2023
SHIMOGA | ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಈ ನಡುವೆ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶಗಳ (airport jobs) ಕುರಿತು ಯುವಕರು ನಿರೀಕ್ಷೆ ಹೊಂದಿದ್ದರು. ಈಗ ನಿರೀಕ್ಷೆ ಹುಸಿಯಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ವಿಮಾನ ನಿಲ್ದಾಣ ಫೆ.27ರಂದು ಉದ್ಘಾಟನೆ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ.
ಉದ್ಯೋಗದ ನಿರೀಕ್ಷೆ, ಅಭಿಯಾನ
ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ (airport jobs) ಲಭಿಸಲಿದೆ ಎಂಬ ನಿರೀಕ್ಷೆ ಇತ್ತು. ಕೆಲವು ನಕಲಿ ಜಾಹೀರಾತುಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇನ್ನು, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡಿಗರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂಬ ಅಭಿಯಾನವು ಆರಂಭವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಯುವಕರು ಅಭಿಯಾನಕ್ಕೆ ಕೈ ಜೋಡಿಸಿದ್ದರು.
ಸುಳ್ಳಾಯಿತು ಯುವಕರ ನಿರೀಕ್ಷೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಬುಧವಾರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮ ಪ್ರತಿನಿಧಿಗಳು, ಸ್ಥಳೀಯರಿಗೆ ಕೆಲಸ ಕೊಡುವ ಕುರಿತು ಸಾಮಾಜಿಕ ಜಾಲತಾಣದಲ್ಲಿನ ಅಭಿಯಾನದ ಕುರಿತು ಪ್ರಶ್ನಿಸಿದರು. ಆಗ ಅಧಿಕಾರಿಗಳು ಉದ್ಯೋಗ ಸಂಬಂಧ ಸ್ಪಷ್ಟನೆ ನೀಡಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯ ದಿನಾಂಕ ಫೈನಲ್, ಕಾಮಗಾರಿ ಪರಿಶೀಲಿಸಿದ ಮಾಜಿ ಸಿಎಂ
ಅಧಿಕಾರಿಗಳು ಹೇಳಿದ್ದೇನು?
ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗಾಗಲೇ ಭದ್ರತಾ ಸಿಬ್ಬಂದಿ ನೇಮಕಾತಿ ಮಾಡಿದೆ. ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಕೂಡ ಸಿಬ್ಬಂದಿಗಳ ನೇಮಕಾತಿ ಆಗಿ ಈಗಾಗಲೇ ಅವರು ತರಬೇತಿ ಪಡೆಯುತ್ತಿದ್ದಾರೆ. ಉಳಿದಂತೆ ಹೌಸ್ ಕೀಪಿಂಗ್ ಸಿಬ್ಬಂದಿಗಳು ಸಣ್ಣ ಪ್ರಮಾಣದಲ್ಲಿ ನೇಮಕವಾಗಬೇಕಿದೆ. ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆಯನ್ನು ಇನ್ನೂ ಹೊರಡಿಸಿಲ್ಲ. ಆದರೆ ಈ ಬಗ್ಗೆ ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಮಾಹಿತಿ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ನಿಲ್ದಾಣದಲ್ಲಿ ನೀರಿನ ಬಾಟಲಿ ಕೊಂಡು ಬಸ್ ಹತ್ತಿದ ವಿದ್ಯಾರ್ಥಿನಿಗೆ ಕಾದಿತ್ತು ಆಘಾತ

LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



