SHIVAMOGGA LIVE NEWS | 21 JANUARY 2023
SHIMOGA | ನಗರದಲ್ಲಿ ಜ.24ರಂದು ಉದ್ಯೋಗ ಮೇಳ (udyoga mela) ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ಸಾಗರ ರಸ್ತೆ ಪಂಪಾ ನಗರದ 2ನೇ ಅಡ್ಡರಸ್ತೆಯ ಗುತ್ಯಪ್ಪ ಕಾಲೋನಿಯಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪೆನಿಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲ್ಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ತಮ್ಮ ಬಯೋಡೇಟಾ (ರೆಸ್ಯೂಮ್) ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ರವೇಶ ಉಚಿತವಾಗಿರುತ್ತದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ, ಅಧಿಕಾರಿಗಳು ಹೇಳೋದೇನು?
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ದೂ.ಸಂ: 08182-255293, 9380663606 / 9482023412 ನ್ನು ಸಂಪರ್ಕಿಸಬಹುದು.