ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸದ ವಿಚಾರ, ಪೋಸ್ಟ್ ವೈರಲ್ ಬೆನ್ನಿಗೆ ಪೊಲೀಸರು ಅಲರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 FEBRUARY 2023

SHIMOGA | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ನಕಲಿ ಪೋಸ್ಟ್ ಪ್ರಕಟಿಸಿದವರ ವಿರುದ್ಧ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ‌. ಪೋಸ್ಟ್ ಸಿದ್ಧಪಡಿಸಿ (Fake Post) ಜಾಲತಾಣದಲ್ಲಿ ಹರಿಬಿಟ್ಟವರ ಪತ್ತೆ ಕಾರ್ಯ ನಡೆಸಲಾಗುತ್ತಿದೆ.

ವಿಮಾನ ನಿಲ್ದಾಣದಲ್ಲಿ ಕೆಲಸ ಖಾಲಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದಾಡುತ್ತಿತ್ತು. ಇದರಲ್ಲಿ ವಿವಿಧ ಹುದ್ದೆಗಳನ್ನು ಕೂಡ ಸೂಚಿಸಲಾಗಿತ್ತು. ಅಲ್ಲದೆ ಈ ಮೇಲ್ ಐಡಿಯನ್ನು ಕೂಡ ಪ್ರಕಟಿಸಲಾಗಿದೆ.

Fake-Job-Poster-about-Shimoga-Airport

ಪೋಸ್ಟ್ ನಂಬಿ ರೆಸ್ಯೂಮ್ ಕಳಿಸಿದರು

ಈ ಪೋಸ್ಟರ್ (Fake Post) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಮಾನ ನಿಲ್ದಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆ ನೇಮಕಾತಿ ನಡೆಯುತ್ತಿದೆ ಎಂದು ನಂಬಿಕೊಂಡು, ಹಲವರು ಪೋಸ್ಟರ್‌ನಲ್ಲಿ ಸೂಚಿಸಿದ ಈ ಮೇಲ್  ಐಡಿಗೆ ತಮ್ಮ ಸ್ವವಿವರ ಕಳುಹಿಸಿದ್ದಾರೆ‌.

Police-Jeep-in-Shimoga-city

ಅಲರ್ಟ್ ಆದ ಪೊಲೀಸ್

ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ಕುರಿತು ನಕಲಿ ಪೋಸ್ಟರ್ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಈ ಕುರಿತು ವಾಟ್ಸಪ್ ಮೂಲಕ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ‘ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಪೋಸ್ಟ್ ನಕಲಿ. ಸಾರ್ವಜನಿಕರು ಇದನ್ನು ನಂಬಿ ವಂಚನೆಗೊಳಗಾಗಬಾರದು. ಈ ಪೋಸ್ಟ್‌‌ನ ಮೂಲ ಪತ್ತೆ ಹಚ್ಚಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

JANUARY-2023-REACH

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಮತ್ತೆ ಶುರುವಾಯ್ತು ಪ್ರತಿಭಟನೆಗಳು, ಆಗ್ರಹ

ಈ ಮೊದಲೆ ಎಚ್ಚರಿಸಿದ್ದೆವು

ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ ಒಡ್ಡುತ್ತಿರುವುದು, ಆಕಾಂಕ್ಷಿಗಳನ್ನು ವಂಚಿಸುತ್ತಿರುವ ಕುರಿತು ಶಿವಮೊಗ್ಗ ಲೈವ್.ಕಾಂ ವೆಬ್ ಸೈಟ್ ಈ ಮೊದಲೆ ಎಚ್ಚರಿಸಿತ್ತು. ಸಂಸದ ರಾಘವೇಂದ್ರ, ವಿಮಾನ ನಿಲ್ದಾಣದ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಪ್ರಟಿಸಿತ್ತು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಐಐಡಿಸಿ ಅಧ್ಯಕ್ಷರು, ನಿರ್ದೇಶಕರು ಭೇಟಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 2, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment