ಶಿವಮೊಗ್ಗ ಜಿಲ್ಲೆಯಲ್ಲಿ ಬೋಗಸ್ ಕಾರ್ಡ್ ರದ್ಧತಿಗೆ ಅಭಿಯಾನ, ರದ್ದುಗೊಳಿಸದಿದ್ದರೆ ಕಾನೂನು ಕ್ರಮ, ಏನಿದು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 2 FEBRUARY 2023

SHIMOGA | ನಕಲಿ ದಾಖಲೆ ನೀಡಿ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಪಡೆದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರ ಕಾರ್ಡ್‍ಗಳನ್ನು ರದ್ದುಪಡಿಸಲು (Card Cancel) ಜಿಲ್ಲೆಯಲ್ಲಿ ಫೆ.25 ರವರೆಗೆ ಬೋಗಸ್ ಕಾರ್ಡ್ ನೋಂದಣಿ ರದ್ದತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸೂಚನೆ ಮೇರೆಗೆ ಅಭಿಯಾನ ನಡೆಸಲಾಗುತ್ತಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದ ಕಟ್ಟಡ ಕಾರ್ಮಿಕರಲ್ಲದವರು ಎಲ್ಲಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಹೋಗಿ ಮೂಲ ಗುರುತಿನ ಚೀಟಿ ಸಲ್ಲಿಸಬೇಕು. ಇಲ್ಲವಾದಲ್ಲಿ ಕಾರ್ಮಿಕ ನಿರೀಕ್ಷಕರು ಖುದ್ದು ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಮತ್ತು ಸೌಲಭ್ಯ ಪಡೆದ ಫಲಾನುಭವಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅನರ್ಹ ಕಾರ್ಮಿಕರಿಗೆ ಉದ್ಯೋಗ ಪ್ರಮಾಣ ಪತ್ರ ನೀಡುವ ವ್ಯಕ್ತಿ, ಸಂಸ್ಥೆ, ಪ್ರಾಧಿಕಾರ ಸಂಘಟನೆಗಳ ವಿರುದ್ಧವು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸೀಬಿರಂಗಯ್ಯ ಎಚ್ಚರಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಹಾಲು ಒಕ್ಕೂಟದಲ್ಲಿ ಹಲವು ಕೆಲಸ ಖಾಲಿ ಇದೆ, 97 ಸಾವಿರದ ವರೆಗೂ ಸಿಗಲಿದೆ ಸಂಬಳ

JANUARY-2023-REACH

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment