SHIVAMOGGA LIVE NEWS | 3 FEBRUARY 2023
SHIMOGA : ವಿವಿಧ ಕಾರಣಕ್ಕೆ ತೆರವಾಗಿರುವ ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ಉಪ ಚುನಾವಣೆ (By Election) ನಡೆಸಲು ದಿನಾಂಕ ನಿಗದಿಯಾಗಿದೆ. ಫೆ.25ರಂದು ಮತದಾನ ನಡೆಯಲಿದೆ. ಜಿಲ್ಲೆಯ ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 4 ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.
ಯಾವ್ಯಾವ ಗ್ರಾ. ಪಂನಲ್ಲಿ ಚುನಾವಣೆ?
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿಯ ಒಂದು ಸ್ಥಾನ, ನಾಗೋಡಿ (ನಿಟ್ಟೂರು) ಗ್ರಾಮ ಪಂಚಾಯಿತಿಯ ಎರಡು ಸ್ಥಾನ, ಭದ್ರಾವತಿ ಯಡೇಹಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನಕ್ಕೆ ಉಪ ಚುನಾವಣೆ (By Election) ನಿಗದಿಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಧಿಸೂಚನೆ ಯಾವಾಗ ಪ್ರಕಟವಾಗಲಿದೆ?
ಫೆ.8ರಂದು ಉಪ ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಫೆ.14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಉಮೇದುವಾರಿಕೆ ಹಿಂಪಡೆಯಲು ಫೆ.17ರಂದು ಕೊನೆಯ ದಿನ. ಫೆ.25ರಂದು ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯಕತೆ ಇದ್ದರೆ ಫೆ.27ರಂದು ನಡೆಸಬಹುದಾಗಿದೆ. ಫೆ.28ರಂದು ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಉದ್ಯೋಗ, ಉಚಿತ ಸ್ವಯಂ ಉದ್ಯೋಗ ತರಬೇತಿ, ಎಲ್ಲಿ? ಯಾರಿಗೆಲ್ಲ ಅವಕಾಶ?