ಶಿವಮೊಗ್ಗದಲ್ಲಿ ರವಿ ಚನ್ನಣ್ಣನವರ್, ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ

SHIVAMOGGA LIVE NEWS | 3 FEBRUARY 2023

SHIMOGA : ಓದುವ ಸಮಯ, ಸಾಧಿಸುವ ಅವಕಾಶ ಸದಾ ಬದುಕಿನಲ್ಲಿ ಸಿಗುವುದಿಲ್ಲ. ಜಗದಲ್ಲಿ ರೋಗ ರುಜಿನಕ್ಕೆ ಶಿಕ್ಷಣವೇ ಮದ್ದು ಎಂದು ಐಪಿಎಸ್ ಅಧಿಕಾರಿ, ಕಿಯೊನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ.ಡಿ.ಚನ್ನಣ್ಣನವರ್ ತಿಳಿಸಿದರು. (Ravi Channannavar)

Shivamogga-Live-Number-1-Website

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಚಿರಾಗ್ ಇನ್ಫೋಟೆಕ್, ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಕಿಯೋನಿಕ್ಸ್ ಸಂಸ್ಥೆಯ ಉನ್ನತ ತರಬೇತಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

Ravi-Channannanavar-Inaugurates-programme-in-JNNCE-College

ಸಮಯ ಮತ್ತು ಅವಕಾಶ ಬದುಕಿನಲ್ಲಿ ಅಮೂಲ್ಯ. ಓದುವ ಸಮಯ, ಸಾಧಿಸುವ ಅವಕಾಶ ಸದಾ ಬದುಕಿನಲ್ಲಿ ಸಿಗುವುದಿಲ್ಲ. ಸಿಗುವ ಅವಕಾಶ ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ನಮ್ಮ ಓದಿನ ಹಪಾಹಪಿಯಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಹಿಂದೆ ಯಾಗಗಳ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಆಶಿಸಲಾಗುತ್ತಿತ್ತು. ಇಂದು ವಿದ್ಯೆಯ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂಬ ಯಾಗ ನಡೆಯುತ್ತಿದೆ ಎಂದರು.

ಇದನ್ನೂ ಓದಿ – ಟ್ರಾಫಿಕ್ ದಂಡ 50% DISCOUNT, ಶಿವಮೊಗ್ಗದಲ್ಲಿ ಎಲ್ಲೆಲ್ಲಿ ದಂಡ ಕಟ್ಟಬಹುದು? ಎಷ್ಟು ದಿನ ಟೈಮ್ ಇದೆ?

ಪೋಲೀಸರಿಗೆ ಇರುವಷ್ಟು ಅವಕಾಶ ಈ ಜಗತ್ತಿನಲ್ಲಿ ಯಾರಿಗೂ ಇಲ್ಲ. ಈ ಜಗತ್ತಿಗೆ ಶಾಂತಿಯ ಅವಶ್ಯಕತೆಯಿದೆ. ಅಂತಹ ಶಾಂತಿ ಮತ್ತು ಸುಭದ್ರತೆ ಕಾಪಾಡುವಲ್ಲಿ ಪೋಲೀಸರ ಪಾತ್ರ ಮಹತ್ವದ್ದು ಎಂದು ಹೇಳಿದರು.

ಕಿಯೋನಿಕ್ಸ್ ನಿಂದ ವಿವಿಧ ಕೋರ್ಸ್

ಕಿಯೋನಿಕ್ಸ್ ಸಂಸ್ಥೆಯಿಂದ ಐಐಟಿ ಐಐಎಂ ಪ್ರೊಫೆಸರ್ ಗಳಿಂದ ಕೃತಕ ಬುದ್ಧಿಮತ್ತೆ, ಐಓಟಿ, ಸೈಬರ್ ಸೆಕ್ಯುರಿಟಿ ಸೇರಿದಂತೆ ಅನೇಕ ತಾಂತ್ರಿಕ ಉನ್ನತ ಕೋರ್ಸ್‌ಗಳನ್ನು ಒದಗಿಸುತ್ತಿದೆ. ಈ ಮೂಲಕ ಸಾಮಾನ್ಯ ಮತ್ತು ಗ್ರಾಮೀಣ ಪ್ರದೇಶದ ಯುವ ಸಮೂಹದ ಸಬಲೀಕರಣ ಸಾಧ್ಯವಾಗಲಿದೆ. ಕಿಯೋನಿಕ್ಸ್ ಪೂರಕ ವೇದಿಕೆಗಳನ್ನು ಬಳಸಿಕೊಳ್ಳಿ ಎಂದರು.

JANUARY-2023-REACH

ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಸಂಸ್ಥೆಯ ಆಯೋಜಕ ನಿರ್ದೇಶಕರಾದ ಕುಮಾರ್.ಪಿ, ಕೋರ್ಸ್ ನಿರ್ದೇಶಕ ಡಾ.ಸರೀತ್ ಕುಮಾರ್, ಜೆ.ಎನ್.ಎನ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಡಿವೈಎಸ್ಪಿ ಸುರೇಶ್, ಚಿರಾಗ್ ಇನ್ಫೊಟೆಕ್ ಗಿರೀಶ್.ಡಿ.ಪಿ, ಎಂಸಿಎ ವಿಭಾಗದ ನಿರ್ದೇಶಕರಾದ ಡಾ.ಪ್ರಭುದೇವ, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಶ್ರೀಕಾಂತ್, ಸಹ ಪ್ರಾಧ್ಯಾಪಕರಾದ ಪ್ರಶಾಂತ್ ಅಂಕಲಕೋಟಿ, ವಿಕ್ರಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 3, 2023

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

Leave a Comment