2 ತಿಂಗಳು ಬಾಳೆಬರೆ ಘಾಟ್ ಬಂದ್, ತೀರ್ಥಹಳ್ಳಿ, ಸಾಗರ, ಹೊಸನಗರದಿಂದ ಕುಂದಾಪುರಕ್ಕೆ 3 ಬದಲಿ ಮಾರ್ಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 FEBRUARY 2023

SHIMOGA : ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ ಘಾಟ್ ನಲ್ಲಿ (Balebare Ghat Road) ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

Balebare Ghat

ಯಾವೆಲ್ಲ ಬದಲಿ ಮಾರ್ಗ?

ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು. ತೀರ್ಥಹಳ್ಳಿ – ಹೆಬ್ರಿ – ಉಡುಪಿ – ಕುಂದಾಪುರ ರಸ್ತೆಯಲ್ಲಿ ಸಂಚರಿಸಬಹುದು. (Balebare Ghat Road)

ಇದನ್ನೂ ಓದಿ – ಟ್ರಾಫಿಕ್ ದಂಡ 50% DISCOUNT, ಶಿವಮೊಗ್ಗದಲ್ಲಿ ಎಲ್ಲೆಲ್ಲಿ ದಂಡ ಕಟ್ಟಬಹುದು? ಎಷ್ಟು ದಿನ ಟೈಮ್ ಇದೆ?

ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ -ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ  ಮಾರ್ಗದಲ್ಲಿ ಸಂಚರಿಸಬೇಕು.

ಶಿವಮೊಗ್ಗ, ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆಗೆ ಹೋಗು ಲಘು ಮತ್ತು ಭಾರಿ ವಾಹನಗಳಿಗು ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಈ ವಾಹನಗಳು ಹೊಸನಗರ – ನಗರ –  ಕೊಲ್ಲೂರು ರಸ್ತೆಯಲ್ಲಿ ಸಂಚರಿಸಬೇಕು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 3, 2023

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

Leave a Comment