ಶಿವಮೊಗ್ಗಕ್ಕೆ ಕೋಟಿ ಕೋಟಿ ಮೊತ್ತದ ಸೈನ್ಸ್ ಮ್ಯೂಸಿಯಂ, ನವುಲೆಯಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್

SHIVAMOGGA LIVE NEWS | 4 FEBRUARY 2023

SHIMOGA | ಸಹ್ಯಾದ್ರಿ ಕಾಲೇಜು ಆವರಣದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ (Science Museum) ಆರಂಭಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. (ಈ ಸುದ್ದಿಯನ್ನು ಇನ್ನು 64 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

BY-Raghavendra-about-Sahyadri-College

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಸೈನ್ಸ್ ಮ್ಯೂಸಿಯಂ ಆರಂಭಕ್ಕೆ ಕೇಂದ್ರ ಸರ್ಕಾರ 6.55 ಕೋಟಿ ರೂ. ಮತ್ತು ರಾಜ್ಯ ಸರ್ಕಾರ 8.65 ಕೋಟಿ ರೂ. ಮಂಜೂರು ಮಾಡಿದೆ. ಅದರ ನಿರ್ವಹಣೆಗೆ ಪ್ರತ್ಯೇಕವಾಗಿ 3 ಕೋಟಿ ರೂ. ಮಂಜೂರಾಗಿದೆ. ಮೊದಲ ಹಂತದಲ್ಲಿ ಕೆಟಗರಿ 2 ವಿಭಾಗದ ಸೈನ್ಸ್ ಮ್ಯೂಸಿಯಂ ಸ್ಥಾಪಿಸಲಾಗಿದೆ. ಮುಂದೆ ಕೆಟಗರಿ 1ಕ್ಕೆ ಪರಿವರ್ತಿಸಲಾಗುತ್ತದೆ ಎಂದು ತಿಳಿಸಿದರು.

ವಿಜ್ಞಾನಕ್ಕೆ ಸಂಬಂಧಿಸಿದ ಕಾರ್ಯಾಗಾರ, ವಿಚಾರ ಸಂಕಿರಣ, ಸಂಶೋಧನೆಗಳಿಗೆ ಸೈನ್ಸ್ ಮ್ಯೂಸಿಯಂ (Science Museum) ಪೂರಕವಾಗಲಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಿಜ್ಞಾನ ಕುರಿತು ಹೆಚ್ಚು ತಿಳಿಯಲು ಅನುಕೂಲವಾಗಲಿದೆ ಎಂದರು.

ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನವುಲೆಗೆ ಶಿಫ್ಟ್

ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಈ ಹಿಂದೆ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಆರಂಭಿಸಲು ಯೋಜಿಸಲಾಗಿತ್ತು. ಇದಕ್ಕೆ ಪರ ವಿರೋಧ ಚರ್ಚೆಗಳು ಆಗಿದ್ದರು. ಈ ಯೋಜನೆಯನ್ನು ನವುಲೆ ಕೃಷಿ ಕಾಲೇಜು ಆವರಣಕ್ಕೆ ಶಿಫ್ಟ್ ಮಾಡಲಾಗಿದೆ. 70 ಕೋಟಿ ರೂ. ಮೊತ್ತದ ಯೋಜನೆಗೆ ಜಾಗ ಹಸ್ತಾಂತರವಾಗಬೇಕಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

JANUARY-2023-REACH

BY-Raghavendra-about-Sahyadri-College

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment