SHIVAMOGGA LIVE NEWS | 12 FEBRURARY 2023
SHIMOGA : ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು (Airport Name) ಇಡುವುದು ಬೇಡ. ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನೆ ಇಡಬೇಕು. ಈ ಕುರಿತು ಸದನದಲ್ಲಿ ವಿಷಯ ಮಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, 20ನೇ ಶತಮಾನ ಕಂಡ ಈ ದೇಶದ ಶ್ರೇಷ್ಠ ಕವಿ. ಜ್ಞಾನಪೀಠ ಪ್ರಶಸ್ತಿ ಪಡೆದವರು. ರಾಜ್ಯದ ಗೀತೆಯನ್ನು ರಚಿಸಿದ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ತೀರ್ಮಾನ ಮಾಡಿದ್ದೇವೆ. ಅಧಿವೇಶನದಲ್ಲಿ ಸರ್ವಾನುಮತದಿಂದ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಿದ್ದೇವೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ವಸುದೈವ ಕುಟುಂಬಕಂ ತತ್ವ ಸಾರುವತ್ತ ಕೆಲಸ ಮಾಡುತ್ತಿದ್ದಾರೆ. ಕುವೆಂಪು ಅವರು ವಿಶ್ವಮಾನವ ಸಂದೇಶವನ್ನು ಬರವಣಿಗೆ ಮೂಲಕ ಸಾರಿದ್ದರು. ಅದನ್ನು ಕಾರ್ಯರೂಪಕ್ಕೆ ತರಲು ಪ್ರಧಾನಿ ಮೋದಿ ಅವರು ಶ್ರಮಿಸುತ್ತಿದ್ದಾರೆ. ಕುವೆಂಪು ಅವರ ಹೆಸರನ್ನು (Airport Name) ಇಡಬೇಕು ಎಂದು ಅಧಿವೇಶನದಲ್ಲಿ ತಾವೆ ಪ್ರಸ್ತಾಪಿಸುವುದಾಗಿ ಯಡಿಯೂರಪ್ಪ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ATNC ಕಾಲೇಜು ವಿದ್ಯಾರ್ಥಿಗೆ ಮುಖ್ಯಮಂತ್ರಿ ಬಂಗಾರದ ಪದಕ
ಫೆ.27ರಂದು ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸುವುದು ಖಚಿತವಾಗಿದೆ. ಪ್ರಧಾನಿ ಮೋದಿ ಅವರೆ ಕುವೆಂಪು ಅವರ ಹೆಸರು ಘೋಷಣೆ ಮಾಡಬೇಕು ಎಂಬುದು ತಮ್ಮ ಅಪೇಕ್ಷ ಎಂದರು.
ಸಂಸದ ಬಿ.ವೈ.ರಾಘವೇಂದ್ರ ಅವರು ಸುದ್ದಿಗೋಷ್ಠಿಯಲ್ಲಿದ್ದರು.

LATEST NEWS
- ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP







