SHIVAMOGGA LIVE NEWS | 18 FEBRURARY 2023
SHIMOGA : ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಜಾತ್ರೆ ನಡೆಯುತ್ತಿದೆ. ಈ ಹಿನ್ನೆಲೆ ಫೆ.18ರ ಬೆಳಗಿನ ಜವಾದಿಂದ ಫೆ.19ರ ಬೆಳಗಿನ ಜವಾದವರೆಗೆ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ, ಈ ಮಾರ್ಗದಲ್ಲಿ ತಾತ್ಕಾಲಿಕವಾಗಿ (Road Diversion) ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ವಾಹನಗಳಿಗೆ ಪರ್ಯಾಯ ಮಾರ್ಗ
ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ವಾಹನಗಳು ಗಜಾನನ ಗೇಟ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್ಹೆಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರಬೇಕು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್ಹೆಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ನಿಂದ ಗಜಾನನ ಗೇಟ್ ಮೂಲಕ ಬಂದು ಶಿವಮೊಗ್ಗ ಸೇರಬೇಕು.
ಇದನ್ನೂ ಓದಿ – ವಿಮಾನ ನಿಲ್ದಾಣದ ಹೆಸರಿನ ಬಗ್ಗೆ ಮತ್ತೆ ಶುರುವಾಯ್ತು ಚರ್ಚೆ, ಹೋರಾಟ, ಯಾರೆಲ್ಲರ ಹೆಸರು ಮುನ್ನೆಲೆಗೆ ಬಂದಿದೆ?
ಮೇಲ್ಕಂಡ ಮಾರ್ಗಗಳಲ್ಲಿ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನ ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಅವರು ತಿಳಿಸಿದ್ದಾರೆ.