SHIVAMOGGA LIVE NEWS | 27 FEBRURARY 2023
SHIMOGA : ನರೇಂದ್ರ ಮೋದಿ ಅವರು ಪ್ರಧಾನಿಯಾದ (PM Modi) ಬಳಿಕ ಶಿವಮೊಗ್ಗಕ್ಕೆ ಅವರು ಎರಡನೆ ಭಾರಿ ಭೇಟಿ ನೀಡುತ್ತಿದ್ದಾರೆ. ಕಳೆದ ಸರ್ತಿ ಚುನಾವಣೆ ಸಂದರ್ಭ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ್ದರು. ಈ ಸರ್ತಿ ಸರ್ಕಾರಿ ಕಾರ್ಯಕ್ರಮವಾದರೂ, ಚುನಾವಣೆ ಹೊತ್ತಿನಲ್ಲೇ ಆಗಮಿಸಿದ್ದಾರೆ.
ಮೊದಲ ಭೇಟಿ
2018ರ ಮೇ 5ರಂದು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಕುವೆಂಪು ರಂಗಮಂದಿರ ಹಿಂಭಾಗದ ಎನ್.ಇ.ಎಸ್. ಮೈದಾನದಲ್ಲಿ ರಾಜಕೀಯ ಸಮಾವೇಶ ನಡೆಸಿದ್ದರು. ಬಿಜೆಪಿ ಪರವಾಗಿ ಪ್ರಚಾರಕ್ಕೆ ಮೋದಿ ಆಗಮಿಸಿದ್ದರು. ಪ್ರಧಾನಿ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದು ಎರಡನೆ ಭೇಟಿ
ಪ್ರಧಾನಿ ಆದ ಮೇಲೆ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಎರಡನೆ ಭಾರಿ ಭೇಟಿ ನೀಡುತ್ತಿದ್ದಾರೆ. ಬೆಳಗ್ಗೆ 9 ಗಂಟೆಗೆ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಹೊರಡಲಿದ್ದಾರೆ. 11.35ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನ ಲ್ಯಾಂಡ್ ಆಗಲಿದೆ. 11.40ರ ಹೊತ್ತಿಗೆ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ವೀಕ್ಷಣೆ ಮಾಡಲಿದ್ದಾರೆ. 12 ಗಂಟೆಗೆ ಕಾರ್ಯಕ್ರಮದ ವೇದಿಕೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 1.25ಕ್ಕೆ ಬೆಳಗಾವಿಗೆ ತೆರಳಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಗೊತ್ತಿರಬೇಕಾದ 10 ಪ್ರಮುಖ ಸಂಗತಿ ಇಲ್ಲಿದೆ