SHIVAMOGGA LIVE NEWS | 3 MARCH 2023
SHIMOGA : ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿ ಮನೆಗೆ ಗ್ಯಾರಂಟಿ ಕಾರ್ಡ್ (Guarantee Card) ವಿತರಣೆ ಮಾಡಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಗ್ಯಾರಂಟಿ ಕಾರ್ಡ್ ವಿತರಣೆಗೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್ ಅವರು, ಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 40 ಸಾವಿರ ಗ್ಯಾರಂಟಿ ಕಾರ್ಡ್ (Guarantee Card) ವಿತರಿಸಲು ಯೋಜಿಸಲಾಗಿತ್ತು. ಆದರೆ ಅಷ್ಟು ಕಾರ್ಡುಗಳು ಸಾಲುತ್ತಿಲ್ಲ ಎಂದು ಕಾರ್ಯಕರ್ತರು ತಿಳಿಸುತ್ತಿದ್ದಾರೆ. ಈ ಹಿನ್ನೆಲೆ ಪ್ರತಿ ಕ್ಷೇತ್ರಕ್ಕೆ 70 ರಿಂದ 80 ಸಾವಿರ ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಮನೆ ಮನೆಗೆ ಕಾರ್ಡುಗಳನ್ನು ತಲುಪಿಸಲಾಗುತ್ತದೆ ಎಂದು ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಉಚಿತ ಅಕ್ಕಿ ಸೇರಿದಂತೆ ಹಲವು ಯೋಜನೆಗಳ ಭರವಸೆಯನ್ನು ಈ ಕಾರ್ಡಿನಲ್ಲಿ ಪ್ರಕಟಿಸಲಾಗಿದೆ ಎಂದರು.
ಇದನ್ನೂ ಓದಿ – ಶಿವಮೊಗ್ಗ ನಗರದಾದ್ಯಂತ ಮಾರ್ಚ್ 6ರಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ, ಕಾರಣವೇನು?
ಮಾರ್ಚ್ 4ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಶಿವಮೊಗ್ಗದಲ್ಲಿ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲಿದ್ದಾರೆ. ಲಗಾನ್ ಕಲ್ಯಾಣ ಮಂದಿರದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಎಐಸಿಸಿ ಕಾರ್ಯದರ್ಸಿ ಮಯೂರ ಜಯಕುಮಾರ್, ಡಾ. ಸಿರಿಬೆಳ್ಳ ಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಉಪಾಧ್ಯಕ್ಷ ಹೆಚ್.ಎಂ.ರೇವಣ್ಣ, ಮಾಜಿ ಸಚಿವರು, ಶಾಸರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.