ಶಿವಮೊಗ್ಗ ಲೈವ್.ಕಾಂ | 10 ಮೇ 2019
ಗೆಲ್ಲುವ ಅಭ್ಯರ್ಥಿ ಟಿಕೆಟ್’ಗಾಗಿ ಅರ್ಜಿ ಸಲ್ಲಿಸದಿದ್ದರೂ, ಅವರ ಮನೆಗೆ ಹೋಗಿ ಕರೆತರುವ ಕೆಲಸ ಆಗಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾರ್ಯಕರ್ತರು ಪಕ್ಷ ನಿಷ್ಠೆಯಿಂದ ಪ್ರಚಾರ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
![]() |
ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಭದ್ರಕೋಟೆಯಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಮೇಲೆ ಇಡೀ ರಾಜ್ಯದ ಜನರ ಗಮನವಿದೆ. ಕಾರ್ಯಕರ್ತರು ನಿಷ್ಠೆಯಿಂದ ಪ್ರಚಾರ ನಡೆಸಬೇಕು ಎಂದರು.
ಶಾಸಕರಾದ ಹಾಲಪ್ಪ ಮತ್ತು ಕುಮಾರ್ ಬಂಗಾರಪ್ಪ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ಈಗಲೇ ಪ್ರಚಾರ ಆರಂಭಿಸುವಂತೆ ತಿಳಿಸಿದ್ದೇನೆ ಎಂದ ಯಡಿಯೂರಪ್ಪ, ಕಾರ್ಯಕರ್ತರೊಂದಿಗೆ ಚರ್ಚಿಸಿ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗುತ್ತದೆ ಎಂದರು.
ಇದೇ ವೇಳೆ, ತಾಲೂಕು ಕಾಂಗ್ರೆಸ್’ನ ಮುಖಂಡ ಹುಚ್ರಾಯಪ್ಪ ಬಿಜೆಪಿ ಸೇರ್ಪಡೆಯಾದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗುರುಮೂರ್ತಿ, ಮುಖಂಡರಾದ ಹಾಲಪ್ಪ, ಈಶ್ವರಪ್ಪ, ಡಾ.ಅಮ್ಜದ್ ಹುಸೇನ್, ಟಿ.ಎಸ್.ಮೋಹನ್ ಸೇರಿದಂತೆ ಹಲವರು ಸಭೆಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200