ಗುಂಡು ತಗುಲಿ ರಿಪ್ಪನ್ ಪೇಟೆ ಮೂಲದ ಯೋಧ ಮಣಿಪುರದಲ್ಲಿ ನಿಧನ, ಮನೆಗೆ ಮಾಜಿ ಶಾಸಕ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 MARCH 2023

RIPPONPETE : ಅಸ್ಸಾಂ ರೈಫಲ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ರಿಪ್ಪನ್ ಪೇಟೆಯ ಯೋಧ (Soldier) ಇವತ್ತು ಬೆಳಗ್ಗೆ ನಿಧನರಾಗಿದ್ದಾರೆ. ವಿಚಾರ ತಿಳಿದು ಅವರ ರಿಪ್ಪನ್ ಪೇಟೆಯಲ್ಲಿ ನೀರವ ಮೌನ ಆವರಿಸಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Assam-Rifiles-personal-sandeep-dies-on-duty

ಸಂದೀಪ್.ಹೆಚ್ (27) ಮೃತ ಯೋಧ (Soldier). ಮಣಿಪುರದ ಇಂಫಾಲದಲ್ಲಿರುವ ಅಸ್ಸಾಂ ರೈಫಲ್ಸ್ ನ ಕಾಲಾ ಕ್ಯಾಂಪ್ ನಲ್ಲಿ ಸಂದೀಪ್ ಸೆಂಟ್ರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಗುಂಡು ಹಾರಿ ಸಂದೀಪ್ ಅವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮರಣೋತ್ತರ ಪರೀಕ್ಷೆಗೆ ಸಿದ್ಧತೆ

ಇಂದು ಬೆಳಗಿನ ಜಾವ ಸಂದೀಪ್ ಅವರ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿದ್ದು, ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೆ ಅವರನ್ನು ವೈದ್ಯಕೀಯ ಪರಿಕ್ಷೆಗೆ ಒಳಪಡಿಸಲಾಗಿದ್ದು, ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾಗಿ ಮಣಿಪುರದ ನಾರ್ಥ್ ಈಸ್ಟ್ ನೌ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಂಫಾಲದ ಜವಾಹರಲಾಲ್ ನೆಹರು ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಸಂಸ್ಥೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಸಂದೀಪ್ ಅವರ ಪಾರ್ಥೀವ ಶರಿರವನ್ನು ಇರಿಸಲಾಗಿದೆ ಎಂದು ವರದಿಯಾಗಿದೆ.

ರಿಪ್ಪನ್ ಪೇಟೆ ಮೂಲದ ಯೋಧ

ಸಂದೀಪ್ ಅವರು ರಿಪ್ಪನ್ ಪೇಟೆಯ ಶಬರೀಶ್ ನಗರದವರು. ಅವರು ಮೃತಪಟ್ಟ ವಿಚಾರ ತಿಳಿಯುತ್ತಿದ್ದಂತೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಂದೀಪ್ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

‘ಸಂದೀಪ್ ಅಕಾಲಿಕ ನಿಧನ ರಾಷ್ಟ್ರಕ್ಕೆ ನಷ್ಟ ಉಂಟಾಗಿದೆ. ಸಂದೀಪ್ ಅವರು ತಮಗೆ ಪರಿಚಿತರು. ಈಚೆಗೆ ಖೋ ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಅವರನ್ನು ಸನ್ಮಾನಿಸಿದ್ದೆ. ಅವರು ನಿಧನರಾದ ವಿಚಾರ ತಿಳಿದು ನೋವುಂಟಾಗಿದೆ’ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ – ಶಿವಮೊಗ್ಗದ ಸೆಂಟ್ರಲ್ ಜೈಲ್ ಮೇಲೆ ಪೊಲೀಸರಿಂದ ದಿಢೀರ್ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2023

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

Leave a Comment