SHIVAMOGGA LIVE NEWS | 21 MARCH 2023
SHIMOGA : ಛತ್ರಪತಿ ಶಿವಾಜಿ ಅವರ 396ನೇ ಜಯಂತಿ ಅಂಗವಾಗಿ ಶಿವಮೊಗ್ಗದ ಲಕ್ಕಿನಕೊಪ್ಪದಲ್ಲಿರುವ ಅಮೂಲ್ಯ ಶೋಧ ವಸ್ತು ಸಂಗ್ರಹಾಲಯದಲ್ಲಿ ಶಿವಾಜಿ ಪುತ್ಥಳಿ (Shivaji Statue) ಅನಾವರಣ ಮಾಡಲಾಗುತ್ತಿದೆ ಎಂದು ಅಮೂಲಕ ಶೋಧ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಖಂಡೋಬರಾವ್ ಅವರು ತಿಳಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಂಡೋಬರಾವ್ ಅವರು, ಮಾರ್ಚ್ 24ರಂದು ಬೆಳಗ್ಗೆ 11.45ಕ್ಕೆ ಹಿಂದೂ ರಾಷ್ಟ್ರದ ಸಂರಕ್ಷಕರಾದ ಛತ್ರಪತಿ ಶಿವಾಜಿ ಅವರ ಪುತ್ಥಳಿಯನ್ನು (Shivaji Statue) ಅನಾವರಣ ಮಾಡಲಾಗುತ್ತಿದೆ. ಲಕ್ಕಿನಕೊಪ್ಪದ ಅಮೂಲ್ಯ ಶೋಧ ವಸ್ತು ಸಂಗ್ರಹಾಲಯದಲ್ಲಿ ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಅವರು ಪುತ್ಥಳಿ ಅನಾವರಣ ಮಾಡಲಿದ್ದಾರೆ ಎಂದರು.
ಪುತ್ಥಳಿಯನ್ನು ದಾನವಾಗಿ ನೀಡಿದ ಬಾಗಲಕೋಟೆಯ ಮಾರುತಿರಾವ್ ಶಿಂಧೆ ಅವರು ಉಪಸ್ಥಿತರಿರಲಿದ್ದಾರೆ. ಮರಾಠ ಅಭಿವೃದ್ಧಿ ನಿಗಮದ ಮಾರುತಿರಾವ್ ಗಣಪತಿರಾವ್ ಶಿಂಧೆ ಅವರು ಶ್ರೀ ಸಾಯಿ ಶಿವಸದನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಖಂಡೋಬರಾವ್ ಅವರು ತಿಳಿಸಿದರು.

ನಾಲ್ಕು ತಲೆಮಾರಿನ ಹಿಂದೆ ಮಗರ್ ಕುಟುಂಬದವರು ಕರ್ನಾಟಕಕ್ಕೆ ಬಂದು ನೆಲೆಸಿದ್ದರ ಕುರಿತು ಬರೆದಿರುವ ಮಗರ್ ವಾಹಿನಿ ಪುಸ್ತಕವನ್ನು ಅಂದು ಬಿಡುಗಡೆ ಮಾಡಲಾಗುತ್ತದೆ. ಕೆಕೆಎಂಪಿ ರಾಜ್ಯಾಧ್ಯಕ್ಷ ಸುರೇಶ್ ರಾವ್ ಸಾಠೆ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ಪ್ರಮುಖರಾದ ರಂಜಿತ್ ಮಗರ್, ರಮೇಶ್ ಬಾಬು ಜಾಧವ್, ಟಿ.ಆರ್.ಅಶ್ವಥನಾರಾಯಣ, ಎಸ್.ಬಿ.ಅಶೋಕ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿಗೆ ಗೋ ಮೂತ್ರ ಸಿಂಪಡಿಸಿದ ಹಿಂದೂ ಕಾರ್ಯಕರ್ತರು, ಕಾರಣವೇನು?
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



