ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 MARCH 2023
SHIMOGA : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25ರಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಆಗಮಿಸಲಿದ್ದಾರೆ. ಅಂದು ಸಂಜೆ ಶಿವಮೊಗ್ಗಕ್ಕೆ ಬರುವ ಪ್ರಧಾನಿ ಮೋದಿ ಅವರು, ಇಲ್ಲಿಂದ ವಿಮಾನದಲ್ಲಿ ನವದೆಹಲಿಗೆ ತೆರಳಲಿದ್ದಾರೆ.

ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾವೇಶ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡುತ್ತಿದ್ದಾರೆ.
ಶಿವಮೊಗ್ಗದಿಂದ ದೆಹಲಿಗೆ ಪ್ರಯಾಣ
ಮಾರ್ಚ್ 25ರಂದು ಬೆಳಗ್ಗೆ 7.40ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ವಾಯುಸೇನೆಯ ವಿಮಾನದಲ್ಲಿ ಬೆಂಗಳೂರಿಗೆ ಹೊರಡಲಿದ್ದಾರೆ. ಬೆಳಗ್ಗೆ 10.10ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ (Airport) ತಲುಪಲಿದ್ದಾರೆ. ಅಲ್ಲಿಂದ ಚಿಕ್ಕಬಳ್ಳಾಪುರ, ಬೆಂಗಳೂರಿನ ವಿವಿಧೆಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.15ಕ್ಕೆ ಹೆಲಿಕಾಪ್ಟರ್ ಮೂಲಕ ದಾವಣಗೆರೆ ತಲುಪಲಿದ್ದಾರೆ.

ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಂಜೆ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣ ಬರಲಿದ್ದಾರೆ. ಸಂಜೆ 5.55ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅನಾವರಣಗೊಳ್ಳಲಿದೆ ಛತ್ರಪತಿ ಶಿವಾಜಿ ಪುತ್ಥಳಿ, ಎಲ್ಲಿ? ಯಾವಾಗ?
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













