ಕಲ್ಲು ತೂರಾಟ ಕೇಸ್, ಹಲವರು ಪೊಲೀಸ್ ವಶಕ್ಕೆ, ಶಿಕಾರಿಪುರಕ್ಕೆ ಗೃಹ ಸಚಿವರ ಭೇಟಿ, ಮೀಟಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 MARCH 2023

SHIKARIPURA : ರೌಡಿ ಪಟ್ಟಿಯಲ್ಲಿರುವವರು, ಚುನಾವಣೆ ಸಂದರ್ಭ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದ ಕೆಲವರ ಪ್ರಚೋದನೆಯಿಂದ ಶಿಕಾರಿಪುರದಲ್ಲಿ ಕಲ್ಲು ತೂರಾಟ, ಪೊಲೀಸರ ಮೇಲೆ ದಾಳಿಯಾಗಿದೆ. ಈ ಸಂಬಂಧ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ (Home Minister) ಆರಗ ಜ್ಞಾನೇಂದ್ರ ತಿಳಿಸಿದರು.

Ston-Pelting-issue-Home-MInister-Araga-Jnanendra-Visit-Shikaripura

ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಪ್ರಮುಖರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಗೃಹ ಸಚಿವರು ಹೇಳಿದ ಮೂರು ಪ್ರಮುಖಾಂಶ

ಪ್ರಮುಖಾಂಶ 1 : ಯಾರೋ ಕೆಲವರು ತಪ್ಪು ತಿಳಿವಳಿಕೆಯಿಂದ ಪ್ರಚೋದನೆ ನೀಡಿದ್ದರಿಂದ ಘಟನೆ ಸಂಭವಿಸಿದೆ. ಯಡಿಯೂರಪ್ಪ ಅವರು ಮೊದಲಿಂದಲು ಬಂಜಾರ ಸಮುದಾಯದ ಅಭಿವೃದ್ಧಿಗೆ  ಶ್ರಮಿಸಿದ್ದಾರೆ. ಅವರ ಮನೆ ಮೇಲೆ ದಾಳಿಯಾಗಿದೆ. ಹಾಗಿದ್ದೂ ಯಡಿಯೂರಪ್ಪ ಅವರು ತಮ್ಮ ಮನೆ ಮೇಲೆ ದಾಳಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಡಿ. ನಾನು ಅವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ ಎಂದರು.

ಇದನ್ನೂ ಓದಿ – ಶಿವಮೊಗ್ಗ – ಶಿಕಾರಿಪುರ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ, ಟ್ರಾಫಿಕ್ ಜಾಮ್

ಪ್ರಮುಖಾಂಶ 2 : ಪೊಲೀಸರ ಮೇಲೆ ಹಲ್ಲೆಯಾಗಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಗಿದೆ. ಯಾರೂ ಇದರಿಂದ ಪ್ರಚೋದಿತರಾಗುವುದು ಬೇಡ. ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಎಲ್ಲರಿಗು ಅನುಕೂಲ ಆಗುವಂತೆ ನೋಡಿಕೊಂಡಿದೆ. ಮುಖ್ಯಮಂತ್ರಿ ಅವರು ತೆರೆದ ಮನಸಿನಲ್ಲಿದ್ದಾರೆ. ವಿದ್ಯವಂತರು ಕುಳಿತು ಚರ್ಚೆ ನಡೆಸಬಹುದು. ಕಾನೂನು ಕೈಗೆತ್ತಿಕೊಳ್ಳುವುದು ಒಳ್ಳೆಯದಲ್ಲ ಎಂದು ಗೃಹ ಸಚಿವ (Home Minister) ಆರಗ ಜ್ಞಾನೇಂದ್ರ ತಿಳಿಸಿದರು.

ಇದನ್ನೂ ಓದಿ – ಯಡಿಯೂರಪ್ಪ ಮನೆ ಮೇಲೆ ದಾಳಿ, ಇಡೀ ದಿನ ಪಟ್ಟಣದಲ್ಲಿ ಏನೇನಾಯ್ತು? ಜನರ ಆಕ್ರೋಶಕ್ಕೆ ಕಾರಣವೇನು?

ಪ್ರಮುಖಾಂಶ 3 : ಚುನಾವಣೆ ಸಂದರ್ಭ ಕೆಲವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದ್ದಾರೆ. ರಾಜಕೀಯ ಉದ್ದೇಶ ಇಟ್ಟುಕೊಂಡು ಅಮಾಯಕರನ್ನು ಪ್ರಚೋದಿಸಿದ್ದಾರೆ. ತಹಶೀಲ್ದಾರ್ ಅವರಿಗೆ ಮನವಿ ಕೊಡಲು ಎಲ್ಲರಿಗು ಸ್ವಾತಂತ್ರ್ಯವಿದೆ. ಆದರೆ ಕಲ್ಲು ಹೊಡೆಯುವುದು, ಪೊಲೀಸರ ಮೇಲೆ ದಾಳಿ ಸಹಿಸಲಾಗದು. ರೌಡಿ ಪಟ್ಟಿಯಲ್ಲಿರುವ ಕೆಲವರು ಕೂಡ ಅಲ್ಲಿದ್ದರು. ಹಾಗಾಗಿ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವರು ತಿಳಿಸಿದರು.

ಇದನ್ನೂ ಓದಿ – ಮನೆ ಮೇಲೆ ಕಲ್ಲು ತೂರಾಟ, ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಹೇಳಿಕೆಯ 5 ಪಾಯಿಂಟ್ ಇಲ್ಲಿದೆ

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 28, 2023

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment