ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 MARCH 2023
SHIMOGA : ವಿಧಾನಸಭೆ ಚುನಾವಣೆ ಹಿನ್ನಲೆ ಜಿಲ್ಲೆಯಾದ್ಯಂತ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ ಶಿವಮೊಗ್ಗದಲ್ಲಿ ದಾಖಲೆ ಇಲ್ಲದೆ ಕೊಂಡೊಯ್ಯುತ್ತಿದ್ದ ನಾಲ್ಕು ಲಕ್ಷ ರೂ. ಹಣ (Money), ಜಿಲ್ಲೆಯ ವಿವಿಧೆಡೆ ಮದ್ಯ ವಶಕ್ಕೆ ಪಡೆಯಲಾಗಿದೆ.

ನಾಲ್ಕು ಲಕ್ಷ ರೂ. ಹಣ
ಶಿವಮೊಗ್ಗದಲ್ಲಿ ಬುಧವಾರ 4 ಲಕ್ಷ ರೂ. ಹಣ (Money) ವಶಕ್ಕೆ ಪಡೆಯಲಾಗಿದೆ. ಸಮರ್ಪಕ ದಾಖಲೆ ಇಲ್ಲದೆ ಹಣ ಕೊಂಡೊಯ್ಯುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೀಜ್ ಆಗಿದೆ.
ಅಕ್ರಮ ಮದ್ಯ ವಶಕ್ಕೆ
ಜಿಲ್ಲೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮತ್ತು ಸಂಗ್ರಹಿಸಿಟ್ಟಿದ್ದ ಮದ್ಯವನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಬುಧವಾರ ಜಿಲ್ಲೆಯಲ್ಲಿ 258.18 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 16.01 ಲೀಟರ್, ಭದ್ರಾವತಿಯಲ್ಲಿ 13.25 ಲೀಟರ್, ಶಿವಮೊಗ್ಗದಲ್ಲಿ 82.08 ಲೀಟರ್, ತೀರ್ಥಹಳ್ಳಿಯಲ್ಲಿ 28.97 ಲೀಟರ್, ಶಿಕಾರಿಪುರದಲ್ಲಿ 10.08 ಲೀಟರ್, ಸಾಗರದಲ್ಲಿ 107.79 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮದ್ಯದ ಅಂದಾಜು ಮೌಲ್ಯ 82,265 ರೂ. ತಿಳಿದು ಬಂದಿದೆ.
ಇದನ್ನೂ ಓದಿ – ಚುನಾವಣೆ ಹೊತ್ತಲ್ಲಿ ಎಷ್ಟು ಹಣ ಕೊಂಡೊಯ್ಯಬಹುದು? ಮದುವೆ ಮಾಡಲು ಬೇಕಾ ಅನುಮತಿ?
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













