ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 31 MARCH 2023
SHIMOGA : ಸಂಬಂಧಿಯೊಬ್ಬರ ಮನೆಯ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಗಂಧರ್ವ ನಗರದ ಮನೆಯೊಂದರಲ್ಲಿ ಕಳ್ಳತನವಾಗಿದೆ (theft). ಬಾಗಿಲಿನ ಇಂಟರ್ ಲಾಕ್ ಮುರಿದು ಒಳ ನುಗ್ಗಿರುವ ಕಳ್ಳರು ನಗದು ಕಳ್ಳತನ ಮಾಡಿದ್ದಾರೆ.

ಗಂಧರ್ವ ನಗರದ ರೂಪೇಶ್ ಕುಮಾರ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ (theft). ದಾವಣಗೆರೆಯಲ್ಲಿ ಮಾವನ ಮನೆಯಲ್ಲಿ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ರೂಪೇಶ್ ಕುಮಾರ್ ಅವರು ತೆರಳಿದ್ದರು. ಈ ವೇಳೆ ಮನೆಯಲ್ಲಿ ಕಳ್ಳನತವಾಗಿದೆ. ಮನೆಯ ಬೀರುವಿನಲ್ಲಿದ್ದ 5 ಸಾವಿರ ರೂ. ನಗದು ಕಳ್ಳತನವಾಗಿದೆ. ಅಲ್ಲದೆ ಮನೆಯಲ್ಲಿದ್ದ ಬೈಕಿನ ಕೀ ತೆಗೆದುಕೊಂಡು, ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಡಿಸ್ಕವರ್ ಬೈಕನ್ನು ಕಳ್ಳರ ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ – ಮಲವಗೊಪ್ಪದಲ್ಲಿ ಹೆದ್ದಾರಿ ಮೇಲೆ ಟೈರ್ ಗೆ ಬೆಂಕಿ, ಗಾಡಿಕೊಪ್ಪದಲ್ಲಿ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಮಾ.29ರಂದು ಬೆಳಗಿನ ಜಾವ ಎದುರು ಮನೆಯವರ ಕರೆ ಮಾಡಿದಾಗಿ ಕಳ್ಳತನದ ವಿಚಾರ ಗೊತ್ತಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



