ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 APRIL 2023
SHIMOGA : ಪ್ರತಿಷ್ಠಿತ ಕಂಪನಿಯೊಂದರ ರೂಫಿಂಗ್ ಶೀಟ್ ಗಳನ್ನು (sheet) ನಕಲು ಮಾಡಿ ಉತ್ಪಾದನೆ ಮಾಡುತ್ತಿದ್ದ ಶಿವಮೊಗ್ಗದ ಕಂಪನಿಯೊಂದರ ವಿರುದ್ಧ ಪ್ರಕರಣ ದಾಖಲಾಗಿದೆ.

ದೇವಕಾತಿಕೊಪ್ಪದಲ್ಲಿರುವ ಇಂಜಿನಿಯರಿಂಗ್ ವರ್ಕ್ಸ್ ಸಂಸ್ಥೆಯೊಂದರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಂದಾಲ್ ಸ್ಟೀಲ್ ವರ್ಕ್ಸ್ ಕಂಪನಿಯ ರೂಫಿಂಗ್ ಶೀಟ್ ಗಳನ್ನು (sheet) ಹೊಲುವ ರೂಫಿಂಗ್ ಶೀಟ್ ಗಳನ್ನು ದೇವಕಾತಿಕೊಪ್ಪದ ಇಂಜಿನಿಯರಿಂಗ್ ವರ್ಕ್ಸ್ ಸಂಸ್ಥೆಯೊಂದರಲ್ಲಿ ಉತ್ಪಾದನೆ ಮಾಡಲಾಗುತ್ತಿತ್ತು. ಅದರ ಮೇಲೆ ಜಿಂದಾಲ್ ಸ್ಟೀಲ್ ವರ್ಕ್ಸ್ ಸಂಸ್ಥೆಯ ಹೆಸರನ್ನು ಮುದ್ರಿಸಲಾಗುತ್ತಿತ್ತು.
ಜಿಂದಾಲ್ ಸ್ಟೀಲ್ ವರ್ಕ್ಸ್ ಸಂಸ್ಥೆಯ ಹೆಸರು ದುರ್ಬಳಕೆ ಮಾಡಿಕೊಂಡು, ನಷ್ಟ ಉಂಟು ಮಾಡುತ್ತಿದ್ದಾರೆ ಎಂದು ಸಂಸ್ಥೆಯ ಎಗ್ಸಿಕ್ಯೂಟಿವ್ ಸತೀಶ್ ಕುಮಾರ್ ಆರೋಪಿಸಿ ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಯಾರಿಗೂ ಗೊತ್ತಾಗದಂತೆ ಫೇಸ್ ಬುಕ್ಕಿನಲ್ಲಿ ವಿಡಿಯೋ ಅಪ್ಲೋಡ್, ಯುವಕನ ಮನೆ ಬಾಗಿಲಿಗೆ ತಲುಪಿದರು ಸೈಬರ್ ಪೊಲೀಸ್
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP












