SHIVAMOGGA LIVE NEWS | 1 APRIL 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
BENGALURU : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಮಧ್ಯೆ ಬೆಂಗಳೂರಿನಲ್ಲಿ ಸಂಧಾನ ಸಭೆ (meeting) ನಡೆಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸಂಧಾನ ಸಭೆ ನಡೆಸಲಾಯಿತು.

ಏನಾಯ್ತು ಸಂಧಾನ ಸಭೆ?
ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರ ನಡುವೆ ಪ್ರಬಲ ಪೈಪೋಟಿ ಇತ್ತು. ಇದೇ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಧಾನ ಸಭೆ (meeting) ನಡೆಸಲಾಯಿತು. ಈ ವೇಳೆ ಕಿಮ್ಮನೆ ರತ್ನಾಕರ್ ಅವರಿಗೆ ಚುನಾವಣೆಗೆ ಟಿಕೆಟ್ ನೀಡುವ ನಿರ್ಧಾಕ್ಕೆ ಬರಲಾಗಿದೆ ಎಂದು ತಿಳಿದು ಬಂದಿದೆ. ಆರ್.ಎಂ.ಮಂಜುನಾಥಗೌಡ ಅವರನ್ನು ವಿಧಾನ ಪರಿಷತ್ ಗೆ ಕಳುಹಿಸುವ ಭರವಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಕಿಮ್ಮನೆ ರತ್ನಾಕರ್ ಮೊದಲ ರಿಯಾಕ್ಷನ್
ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಕಿಮ್ಮನೆ ರತ್ನಾಕರ್ ಅವರು, ‘ಇಬ್ಬರು ಒಟ್ಟಾಗಿ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಬರಲಿದೆ. ಆದ್ದರಿಂದ ಇಬ್ಬರು ಒಟ್ಟಾಗಿ ಕೆಲಸ ಮಾಡುವುದಾಗಿ ಒಪ್ಪಿಕೊಂಡಿದ್ದೇವೆ. ಟಿಕೆಟ್ ವಿಚಾರ ಪಕ್ಷದ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಬಿಜೆಪಿಯನ್ನ ಸೋಲಿಸಲು ಎಲ್ಲಾ ಪ್ರಯತ್ನ ಮಾಡುತ್ತೇವೆ’ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ಸಿಟಿಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು, ಮುಖಂಡರು ಬೆಂಗಳೂರಿಗೆ ದೌಡು, ಯಾಕೆ? ಯಾರನ್ನೆಲ್ಲ ಭೇಟಿಯಾದರು?
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



