ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 APRIL 2023
SHIMOGA : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಮುಂದಿನ ಹೆಜ್ಜೆ ಬಗ್ಗೆ ಸ್ವಪಕ್ಷ ಮತ್ತು ಕಾಂಗ್ರೆಸ್ ನಲ್ಲಿ ತೀವ್ರ ಕುತೂಹಲ (Curiosity) ಮೂಡಿಸಿದೆ. ಈ ಮಧ್ಯೆ ಕೆಲವು ಮಾಧ್ಯಮಗಳಲ್ಲಿ ಆಯನೂರು ಮಂಜುನಾಥ್ ಅವರಿಗೆ ಬಿಜೆಪಿ ಟಿಕೆಟ್ ಎಂದು ವರದಿಯಾಗಿದೆ. ಇದು ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ.
ಇನ್ನು, ಆಯನೂರು ಮಂಜುನಾಥ್ ಅವರು ಸೋಮವಾರ ಸುದ್ದಿಗೋಷ್ಠಿ ಕರೆದಿದ್ದಾರೆ. ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಚರ್ಚೆಗಳು (Curiosity) ನಡೆಯುತ್ತಿವೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಏನೆಲ್ಲ ಚರ್ಚೆ ಆಗುತ್ತಿದೆ?
ಚರ್ಚೆ 1 : ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದೆ ಇದ್ದರೆ ಆಯನೂರು ಮಂಜುನಾಥ್ ಅವರು ಕಾಂಗ್ರೆಸ್ ಸೇರ್ಪಡೆಯಾಗಬಹುದು, ಸ್ವತಂತ್ರವಾಗಿ ಸ್ಪರ್ಧಿಸಬಹುದು ಎಂದು ಈವರೆಗೂ ಚರ್ಚೆಯಾಗುತ್ತಿತ್ತು. ಆಯನೂರು ಮಂಜುನಾಥ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಕ್ಕಿದೆ ಎಂದೂ ಹಬ್ಬಿಸಲಾಗಿತ್ತು. ಆದರೆ ಕಾಂಗ್ರೆಸ್ ಪಕ್ಷದಲ್ಲಿಯೇ ಇದಕ್ಕೆ ಪ್ರತಿರೋಧ ವ್ಯಕ್ತವಾಯಿತು. ಆಕಾಂಕ್ಷಿಗಳು, ಕಾರ್ಯಕರ್ತರು ರಾಜ್ಯ ನಾಯಕರನ್ನು ಭೇಟಿಯಾಗಿ, ಮನವಿ ಸಲ್ಲಿಸಿದ್ದರು.
ಚರ್ಚೆ 2 : ಆಯನೂರು ಮಂಜೂನಾಥ್ ಅವರು ಸ್ವತಂತ್ರವಾಗಿ ಸ್ಪರ್ಧಿಸುತ್ತಾರೆ. ಬಿಜೆಪಿಯ ಮತಗಳ ವಿಭಜನೆ ಮಾಡಲಿದ್ದಾರೆ ಎಂದು ಚರ್ಚೆಯಾಯಿತು. ಇದು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಹುಮ್ಮಸ್ಸು ಹೆಚ್ಚಿಸಿತ್ತು. 2013ರ ಚುನಾವಣಾ ಫಲಿತಾಂಶ ಮರುಕಳಿಸುವ ಸಾಧ್ಯತೆ ಬಗ್ಗೆ ಚರ್ಚೆಯಾಯಿತು.
ಚರ್ಚೆ 3 : ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಿಜೆಪಿಯಿಂದ ಅವರಿಗೇ ಟಿಕೆಟ್ ಘೋಷಣೆಯಾಗಲಿದೆ ಎಂದು ಚರ್ಚೆಯಾಗುತ್ತಿದೆ. ಕೆಲವು ಮಾಧ್ಯಮಗಳಲ್ಲಿಯು ಈ ಕುರಿತು ವರದಿಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಆಯನೂರು ಮಂಜುನಾಥ್ ಅವರ ಕಚೇರಿ, ಮನೆ ಬಳಿ ಕಾರ್ಯಕರ್ತರು ಬಂದು ಹೋಗುವುದು ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.
ಕುತೂಹಲ ಮೂಡಿಸಿದ ಸುದ್ದಿಗೋಷ್ಠಿ
ಇತ್ತ, ಆಯನೂರು ಮಂಜುನಾಥ್ ಅವರು ಸೋಮವಾರ ಸುದ್ದಿಗೋಷ್ಠಿ ಆಯೋಜಿಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡರಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಆಯನೂರು ಮಂಜುನಾಥ್ ಅವರು ಬಿಜೆಪಿಯಿಂದಲೇ ಸ್ಪರ್ಧಿಸುತ್ತಾರೋ, ಕಾಂಗ್ರೆಸ್ ಸೇರ್ಪಡೆಯಾಗುತ್ತಾರೋ, ಸ್ವತಂತ್ರವಾಗಿ ಕಣಕ್ಕಿಳಿಯುತ್ತಾರೋ ಅನ್ನುವ ಕುರಿತು ಚರ್ಚೆಗಳು ಆರಂಭವಾಗಿದೆ.
ಬಿಜೆಪಿ ಮುಖಂಡರು ಗಪ್ ಚುಪ್
ಶಿವಮೊಗ್ಗ ಬಿಜೆಪಿ ಟಿಕೆಟ್ ವಿಚಾರವಾಗಿ ಮುಖಂಡರು, ಕಾರ್ಯಕರ್ತರು ಮೌನಕ್ಕೆ ಜಾರಿದ್ದಾರೆ. ಕಳೆದ ವಾರ ನಡೆದ ಸುದ್ದಿಗೋಷ್ಠಿ ವೇಳೆ, ‘ಸದ್ಯದ ಬೆಳವಣಿಗೆ ಕುರಿತು ರಾಜ್ಯ ಘಟಕಕ್ಕೆ ವರದಿ ಕಳುಹಿಸುತ್ತೇವೆ. ಮುಂದಿನದ್ದು ಅವರಿಗೆ ಬಿಟ್ಟದ್ದು’ ಎಂದು ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದ್ದರು.ಇದರ ಹೊರತು ಉಳಿದ್ಯಾವ ಮುಖಂಡರು ಟಿಕೆಟ್ ವಿಚಾರವಾಗಿ ನೇರವಾಗಿ ಚರ್ಚೆ ನಡೆಸುತ್ತಿಲ್ಲ.
ಇದನ್ನೂ ಓದಿ – ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಗೊಂದಲ ಕ್ಲಿಯರ್, ಡಿಕೆಶಿ ನೇತೃತ್ವದಲ್ಲಿ ಸಂಧಾನ ಸಭೆ ಸಕ್ಸಸ್, ಏನಾಯ್ತು ಚರ್ಚೆ?
ಹಾಗಾಗಿ, ಕೆ.ಎಸ್.ಈಶ್ವರಪ್ಪ ಅವರು ಪುನಃ ಟಿಕೆಟ್ ಗಿಟ್ಟಿಸಿಕೊಳ್ಳುತ್ತಾರೋ, ಆಯನೂರು ಮಂಜುನಾಥ್ ಅವರನ್ನು ಬಿಜೆಪಿ ಅಖಾಡಕ್ಕಳಿಸುತ್ತೆದೆಯೋ ಅನ್ನುವುದು ಸದ್ಯ ತೀವ್ರ ಕುತೂಹಲ ಮೂಡಿಸಿದೆ.