ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 APRIL 2023
SHIMOGA : ವಿಧಾನ ಸಭೆ ಚುನಾವಣೆ ಮುಗಿಯುವವರೆಗೆ ನಟ ಸುದೀಪ್ (Sudeep) ಅವರ ಅಭಿನಯದ ಸಿನಿಮಾ, ಜಾಹೀರಾತು, ಟಿವಿ ಕಾರ್ಯಕ್ರಮಗಳಿಗೆ ಚುನಾವಣಾ ಆಯೋಗ ತಡೆಯೊಡ್ಡಬೇಕು ಎಂದು ಶಿವಮೊಗ್ಗದ ವಕೀಲ ಕೆ.ಪಿ.ಶ್ರೀಪಾಲ್ ಆಗ್ರಹಿಸಿದ್ದಾರೆ.
ಜಿಲ್ಲಾಧಿಕಾರಿ ಮೂಲಕ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿರುವ ವಕೀಲ ಕೆ.ಪಿ.ಶ್ರೀಪಾಲ್ ಅವರು, ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ನಟ ಸುದೀಪ್ (Sudeep) ಅವರು ಘೋಷಣೆ ಮಾಡಿಕೊಂಡಿದ್ದಾರೆ. ಅವರು ನಟಿಸಿರುವ ಸಿನಿಮಾಗಳು, ಟಿವಿ ಕಾರ್ಯಕ್ರಮಗಳು ಮತ್ತು ಜಾಹೀರಾತುಗಳು ಮತದಾರರ ಮೇಲೆ ಪ್ರಭಾವ ಉಂಟು ಮಾಡಬಹುದು. ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆ ಎಂದು ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಚುನಾವಣೆ ಮುಗಿಯುವವರೆ ನಟ ಸುದೀಪ್ ಅಭಿನಯದ ಸಿನಿಮಾ, ಟಿವಿ ಕಾರ್ಯಕ್ರಮ, ಜಾಹೀರಾತು ಪ್ರದರ್ಶನಕ್ಕೆ ನಿರ್ಬಂಧ ವಿಧಿಸಬೇಕು ಎಂದು ಚುನಾವಣಾ ಆಯೋಗಕ್ಕೆ ವಕೀಲ ಕೆ.ಪಿ.ಶ್ರೀಪಾಲ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ – ಹೊನ್ನಾವರದಿಂದ ಶಿವಮೊಗ್ಗ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಮರಳಿದ ಇಂಜಿನಿಯರ್ ಗೆ ಕಾದಿತ್ತು ಆಘಾತ