ಕಾಂಗ್ರೆಸ್ ಎರಡನೇ ಪಟ್ಟಿ ರಿಲೀಸ್, ತೀರ್ಥಹಳ್ಳಿಗೆ ಅಭ್ಯರ್ಥಿ ಪ್ರಕಟ, ಇನ್ನೂ 3 ಕ್ಷೇತ್ರಕ್ಕೆ ಮುಂದುವರೆದ ಕುತೂಹಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 APRIL 2023

SHIMOGA : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ (Second List) ಬಿಡುಗಡೆಯಾಗದೆ. ಶಿವಮೊಗ್ಗ ಜಿಲ್ಲೆಯ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಮೊದಲ ಪಟ್ಟಿಯಲ್ಲಿ ಮೂರು ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಲಾಗಿತ್ತು. ಇನ್ನೂ ಮೂರು ಕ್ಷೇತ್ರದ ಅಭ್ಯರ್ಥಿಗಳ ಕುರಿತು ಕುತೂಹಲ ಮುಂದುವರೆದಿದೆ.

Congress-Party-Flag

ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿ ಪ್ರಕಟ

ಎರಡನೇ ಪಟ್ಟಿಯಲ್ಲಿ (Second List) ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಲಾಗಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ಸ್ಪರ್ಧೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾಗಿ ಅವರನ್ನು ತೀರ್ಥಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿಸಲಾಗುತ್ತಿದೆ.

Kimmane-Rathnakar-Protest-in-Shimoga

ಮೊದಲ ಪಟ್ಟಿಯಲ್ಲೇ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯ  ಹೆಸರು ಪ್ರಕಟವಾಗುವ ನಿರೀಕ್ಷೆ ಇತ್ತು. ಆದರೆ ಗೊಂದಲವಿದ್ದ ಕಾರಣ ತೀರ್ಥಹಳ್ಳಿ ಕ್ಷೇತ್ರವನ್ನು ಕೈ ಬಿಡಲಾಗಿತ್ತು. ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಅವರ ಸಂಧಾನ ಸಭೆ ಬಳಿಕ ಕಿಮ್ಮನೆ ರತ್ನಾಕರ್ ಅವರ ಹೆಸರು ಪ್ರಕಟಿಸಲಾಗಿದೆ.

ಮೂರು ಕ್ಷೇತ್ರಕ್ಕೆ ಇನ್ನೂ ಕುತೂಹಲ

ಎರಡನೆ ಪಟ್ಟಿ ಬಳಿಕ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಕುರಿತು ಇನ್ನೂ ಕುತೂಹಲ ಮುಂದುವರೆದಿದೆ. ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರದಿಂದ ಕಾಂಗ್ರೆಸ್ ಪಕ್ಷ ಯಾರನ್ನು ಕಣಕ್ಕಿಳಿಸಲಿದೆ ಎಂಬುದು ಇನ್ನೂ ಫೈನಲ್ ಆಗಿಲ್ಲ. ಇಬ್ಬರಿಗಿಂತಲೂ ಹೆಚ್ಚು ಆಕಾಂಕ್ಷಿಗಳು ಈ ಕ್ಷೇತ್ರದಲ್ಲಿರುವುದರಿಂದ ಅಭ್ಯರ್ಥಿ ಕುರಿತು ಗೊಂದಲ ಮುಂದುವರೆದಿದೆ.

ಇದನ್ನೂ ಓದಿ – ನಟ ಸುದೀಪ್‌ಗೆ ಸಂಕಷ್ಟ, ಶಿವಮೊಗ್ಗದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿದ ವಕೀಲ, ಕಾರಣವೇನು?

ಮೊದಲ ಪಟ್ಟಿಯಲ್ಲಿ ಸಾಗರ ಕ್ಷೇತ್ರಕ್ಕೆ ಬೇಳೂರು ಗೋಪಾಲಕೃಷ್ಣ, ಸೊರಬಕ್ಕೆ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ ಅವರ ಹೆಸರನ್ನು ಪ್ರಕಟಿಸಲಾಗಿತ್ತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 6, 2023

Leave a Comment