ಮನೆಯಿಂದ ಕೆಲಸ ಮಾಡಿ, ಕೈ ತುಂಬಾ ಸಂಪಾದಿಸಿ, ಜಾಹೀರಾತು ನಂಬಿದ ಗೃಹಿಣಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 APRIL 2023

SHIMOGA : ವರ್ಕ್ ಫ್ರಂ ಹೋಂ (Work From Home) ಜಾಹೀರಾತು ನಂಬಿ ರಿಜಿಸ್ಟರ್ ಮಾಡಿಕೊಂಡ ಗೃಹಿಣಿಯೊಬ್ಬರು 12.76 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಫೇಸ್‍ ಬುಕ್‍ನಲ್ಲಿ ಕಾಣಿಸಿದ ಜಾಹೀರಾತು ಲಿಂಕ್ ಕ್ಲಿಕ್ ಮಾಡಿ ಗೃಹಿಣಿ ಸಂಕಷ್ಟಕ್ಕೀಡಾಗಿದ್ದಾರೆ.

Online-Fraud-In-Shimoga

ಏನಿದು ಪ್ರಕರಣ?

ಶಿವಮೊಗ್ಗದ ಗೃಹಣಿಯೊಬ್ಬರು (ಹೆಸರು ಗೌಪ್ಯ) ಫೇಸ್ ಬುಕ್‍ನಲ್ಲಿ ವರ್ಕ್ ಫ್ರಂ ಹೋಂ (Work From Home) ಜಾಹೀರಾತು ಗಮನಿಸಿದ್ದರು. ‘ಪಾರ್ಟ್ ಟೈಮ್ ಕೆಲಸ, ಹೆಚ್ಚು ಲಾಭ’ ಎಂದು ಜಾಹೀರಾತಿನಲ್ಲಿ ಪ್ರಕಟಿಸಲಾಗಿತ್ತು. ಇದನ್ನು ನಂಬಿ ತಮ್ಮ ಹೆಸರು, ಮೊಬೈಲ್ ನಂಬರ್ ರಿಜಿಸ್ಟರ್ ಮಾಡಿದ್ದರು. ಕೆಲವೇ ಹೊತ್ತಿನಲ್ಲಿ ಗೃಹಿಣಿಯ ವಾಟ್ಸಪ್ ನಂಬರ್‍ಗೆ ಒಂದು ಲಿಂಕ್ ಬಂದಿದ್ದು, ಪೂರ್ಣ ಮಾಹಿತಿ ದಾಖಲಿಸುವಂತೆ ಸೂಚಿಸಲಾಗಿತ್ತು. ಮಾಹಿತಿ ಒದಗಿಸಿ, ವೆಬ್‍ ಸೈಟ್‍ ಓಪನ್ ಮಾಡಿ ಆರ್ಡರ್ ಖರೀದಿಸಿದ್ದು, ಸೇಲ್ಸ್ ಕಮಿಷನ್ ಹಣ ಗೃಹಿಣಿಯ ಖಾತೆಗೆ ಬಂದಿತ್ತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್‌ಪೋಸ್ಟ್‌ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್

ಲಕ್ಷ ಲಕ್ಷ ಹಣ ವರ್ಗಾವಣೆ

ಕಮಿಷನ್ ಹಣ ಬಂದಿದ್ದರಿಂದ ಖುಷಿಯಾದ ಗೃಹಿಣಿ ಮುಂದಿನ ಟಾಸ್ಕ್‍ಗಳನ್ನು ಕಂಪ್ಲೀಟ್ ಮಾಡಲು ಅಣಿಯಾದರು. ವಿವಿಧ ಟಾಸ್ಕ್‍ಗಳಿಗೆ ಖಾತೆಯಿಂದ ಹಣ ವರ್ಗಾಯಿಸಿದ್ದರು. ತಮ್ಮ ಖಾತೆ, ಪತಿಯ ಅಕೌಂಟ್, ಸಹೋದರಿಯರ ಖಾತೆಗಳಿಂದಲೂ ಹಣ ವರ್ಗಾಯಿಸಿದ್ದರು. ಒಟ್ಟು 12.76 ಲಕ್ಷ ರೂ. ಹಣವನ್ನು ಗೃಹಿಣಿ ವರ್ಗಾಯಿಸಿದ್ದರು.

ಅನುಮಾನದಿಂದ ದೂರು

ಟಾಸ್ಕ್ ಪೂರೈಸಿದ್ದರೂ ಕಮಿಷನ್ ಹಣ ಪಡೆಯಲು ಶೇ.10ರಷ್ಟು ವೈಯಕ್ತಿಕ ತೆರಿಗೆ ಪಾವತಿಸಬೇಕು ಎಂದು ವಂಚಕರು ತಿಳಿಸಿದ್ದಾರೆ. ಇದರಿಂದ ಅನುಮಾನಗೊಂಡ ಗೃಹಿಣಿ ಪರಿಚಿತರಲ್ಲಿ ವಿಚಾರ ತಿಳಿಸಿದ್ದಾರೆ. ಆಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಈ ಹಿನ್ನೆಲೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ KSRTC ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದ ಮಹಿಳೆಗೆ ಆಘಾತ

ಮೋಸದ ಜಾಲಕ್ಕೆ ಬೀಳಬೇಡಿ

ವರ್ಕ್ ಫ್ರಂ ಹೋಂ, ಪಾರ್ಟ್ ಟೈಮ್ ಜಾಬ್ ಹೆಸರಿನಲ್ಲಿ ವಂಚನೆ ನಡೆಯುತ್ತಿದೆ. ವರ್ಕ್‍ ಫ್ರಂ ಹೋಂ ನೆಪದಲ್ಲಿ ಶಿವಮೊಗ್ಗದಲ್ಲಿ ಜನರನ್ನು ವಂಚಿಸುತ್ತಿರುವುದು ಇದೆ ಮೊದಲಲ್ಲ. ದೇಶಾದ್ಯಂತ ನಿತ್ಯ ಒಂದಿಲ್ಲೊಂದು ಪ್ರಕರಣ ದಾಖಲಾಗುತ್ತಿದೆ. ಹಣ ವರ್ಗಾಯಿಸುವ ಮುನ್ನ ಸ್ವಲ್ಪ ಎಚ್ಚರ ವಹಿಸಬೇಕಿದೆ. ಇಲ್ಲವಾದಲ್ಲಿ ಲಕ್ಷಾಂತರ ರೂ. ಹಣ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 10, 2023

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment