ಶಿವಮೊಗ್ಗದ ಡಾಕ್ಟರ್‌ ಮೇಲೆ ಕಾಡಾನೆ ದಾಳಿ, ಗಂಭೀರ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 APRIL 2023

SHIMOGA : ವನ್ಯಜೀವಿ ವಿಭಾಗದ ವೈದ್ಯ (Doctor) ಡಾ.ವಿನಯ್‌ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಆಪರೇಷನ್‌ ಕಾಡಾನೆ ವೇಳೆ ಚನ್ನಗಿರಿಯ ಜೇನಹಳ್ಳಿ ಬಳಿ ಘಟನೆ ಸಂಭವಿಸಿದೆ.

Dr-Vinay-Wild-Life-doctor-in-Shimoga

ಚನ್ನಗಿರಿ ತಾಲೂಕಿನಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದೆ. ಬಾಲಕಿ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಹಿನ್ನಲೆ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ (Doctor) ಡಾ.ವಿನಯ್‌ ಅವರ ಮೇಲೆ ದಾಳಿ ನಡೆಸಿದೆ.

ದಾಳಿಯಾಗಿದ್ದು ಹೇಗೆ?

ಶೋಧ ಕಾರ್ಯದ ವೇಳೆ ಆನೆ ಪತ್ತೆಯಾಗಿತ್ತು. ಕೂಡಲೆ ಅರವಳಿಕೆ ಚುಚ್ಚುಮದ್ದನ್ನು ಆನೆಗೆ ಫೈರ್‌ ಮಾಡಲಾಗಿತ್ತು. ಅನೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕೆಳಗೆ ಬಿದ್ದಿದೆ. ಆ ಬಳಿಕ ಅಧಿಕಾರಿಗಳು ಕಾಡಾನೆ ಸಮೀಪಕ್ಕೆ ಹೋಗಿದ್ದಾರೆ. ಈ ವೇಳೆ ದಿಢೀರ್‌ ಎಚ್ಚರಗೊಂಡ ಆನೆ, ಅರಣ್ಯಾಧಿಕಾರಿಗಳ ಮೇಲೆ ದಾಳಿಗೆ ಮುಂದಾಗಿದೆ. ಈ ವೇಳೆ ಓಡಲು ಮುಂದಾಗಿದ್ದ ಡಾ.ವಿನಯ್‌ ಅವರು ಎಡವಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಆಗ ಆನೆ ದಾಳಿ ನಡೆಸಿದ್ದು, ಡಾ.ವಿನಯ್‌ ಅವರು ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಡಹಗಲೆ ಗನ್ ತೋರಿಸಿ ಬೆದರಿಸದ್ದವನು ಅರೆಸ್ಟ್, ಆತನ ಬಳಿ ಏನೇನೆಲ್ಲ ಸಿಕ್ತು?

ಡಾ. ವಿನಯ್‌ ಅವರನ್ನು ಕೂಡಲೆ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಯಾರು ಈ ಡಾ. ವಿನಯ್?‌

ಡಾ. ವಿನಯ್‌ ಅವರು ಶಿವಮೊಗ್ಗ ವನ್ಯಜೀವಿ ವಿಭಾಗದ ನುರಿತ ವೈದ್ಯರು. ರಾಜ್ಯದ ವಿವಿಧೆಡೆ ಆನೆ ಹಿಡಿಯುವ ಮತ್ತು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸಕ್ರೆಬೈಲು ಬಿಡಾರದಲ್ಲಿರುವ ಆನೆಗಳಿಗೂ ಇವರೆ ವೈದ್ಯರು. ವಿವಿಧೆಡೆ ಇತರೆ ವನ್ಯಜೀವಿಗಳ ಕಾರ್ಯಾಚರಣೆಯಲ್ಲಿಯು ಡಾ.ವಿನಯ್‌ ಭಾಗವಹಿಸಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 11, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment