ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 APRIL 2023
SHIMOGA : ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ ಎನ್ನಲಾದ ಪತ್ರ ಹರಿದಾಡುತ್ತಿದ್ದಾರೆ.
ಪತ್ರದಲ್ಲಿ ಏನಿದೆ?
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಪತ್ರದಲ್ಲಿ, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ.
ಇದನ್ನೂ ಓದಿ – ʼಬಿಜೆಪಿ ಪಟ್ಟಿಯಲ್ಲಿ ಸೋಷಿಯಲ್ ಇಂಜಿನಿಯರಿಂಗ್ಗೆ ಅದ್ಯತೆ, ಸದ್ಯದಲ್ಲೇ ಬಿಡುಗಡೆʼ
ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಪತ್ರದಲ್ಲಿ ಬರೆಯಲಾಗಿದೆ.
ನಿವೃತ್ತಿ ಘೋಷಣೆ ಪತ್ರದ ಕುರಿತು ಕೆ.ಎಸ್.ಈಶ್ವರಪ್ಪ ಅವರು ಈ ಕುರಿತು ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ಪತ್ರದ ಕುರಿತು ಇನ್ನಷ್ಟೆ ಸ್ಪಷ್ಟನೆ ಸಿಗಬೇಕಿದೆ. ಈಶ್ವರಪ್ಪ ಅವರು ಸದ್ಯ ಶಿವಮೊಗ್ಗದ ಮಲ್ಲೇಶ್ವರನಗರದ ಮನೆಯಲ್ಲಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422