ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 APRIL 2023
SHIMOGA : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ಆಕೆಯನ್ನು ಅವಾಚ್ಯವಾಗಿ ನಿಂದಿಸಿ, ಕುತ್ತು ಹಿಸುಕಿದ್ದಾರೆ. ಜನ ಸೇರಿದ್ದರಿಂದ ಮಹಿಳೆಯನ್ನು (Woman) ಬಿಟ್ಟು ಪರಾರಿಯಾಗಿದ್ದಾರೆ ಎಂದು ದೂರು ದಾಖಲಾಗಿದೆ.

ಬಸವನಗುಡಿಯ 4ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ. ಗೃಹಿಣಿಯೊಬ್ಬರು ತಮ್ಮ ಮಕ್ಕಳು ಓದುತ್ತಿರುವ ಖಾಸಗಿ ಶಾಲೆಗೆ ತೆರಳಿ, ಮನೆಗೆ ಮರಳುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು, ಮಹಿಳೆಯನ್ನು (Woman) ಅಡ್ಡಗಟ್ಟಿ ಕತ್ತು ಹಿಸುಕಿದ್ದಾರೆ. ಮಾನಭಂಗಕ್ಕೂ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜನ ಸೇರಿದ್ದರಿಂದ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾರೆ.
ಇದನ್ನೂ ಓದಿ – ತುಂಗಾ ನದಿ ಹಳೆ ಸೇತುವೆಯಿಂದ ಯುವಕನನ್ನು ದಬ್ಬಿದ ಬೈಕ್ ಸವಾರ, ಗಂಭೀರ ಗಾಯ
ಅಡ್ಡಗಟ್ಟಿದ ಇಬ್ಬರ ಪೈಕಿ ಒಬ್ಬಾತನ ವಿರುದ್ಧ ಮಹಿಳೆಯು ಈ ಹಿಂದೆ ಕೋಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೆ ಸಿಟ್ಟಿಗೆ ಆಕೆಯನ್ನು ಅಡ್ಡಗಟ್ಟಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP












