ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ರಸ್ತೆ ತಡೆ, ಟೈರ್‌ಗೆ ಬೆಂಕಿ ಹಚ್ಚಲು ಯತ್ನ, ವಿವಿಧ ಜವಾಬ್ದಾರಿಗೆ ರಾಜೀನಾಮೆ

SHIVAMOGGA LIVE NEWS | 12 APRIL 2023

SHIMOGA : ಈಶ್ವರಪ್ಪ ನಿವೃತ್ತಿ ನಿರ್ಧಾರದ ಹಿನ್ನೆಲೆ ಅವರ ಬೆಂಬಲಿಗರ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ (Protest) ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಯತ್ನಿಸಿ ಸಿಟ್ಟು ಹೊರಹಾಕಿದ್ದಾರೆ. ಪಕ್ಷ ನೀಡಿದ್ದ ಜವಾಬ್ದಾರಿಗೆ ರಾಜೀನಾಮೆ ನೀಡಿದ್ದಾರೆ.

Shivamogga-Live-Number-1-Website

Eshwarappa-followers-protest-in-front-of-BJP-office

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿ ಬಳಿ ಈಶ್ವರಪ್ಪ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಈಶ್ವರಪ್ಪ ಅವರು ನಿವೃತ್ತಿ ನಿರ್ಧಾರ ಕೈಬಿಡಬೇಕು. ಪಕ್ಷದ ಹೈಕಮಾಂಡ್‌ ಈಶ್ವರಪ್ಪ ಅವರಿಗೇ ಟಿಕೆಟ್‌ ನೀಡಬೇಕು ಎಂದು ಒತ್ತಾಯಿಸಿದರು. ಈಶ್ವರಪ್ಪ ಅವರ ಬದಲಿಗೆ ಕೆ.ಈ.ಕಾಂತೇಶ್‌ ಅವರಿಗಾದರೂ ಟಿಕೆಟ್‌ ಘೋಷಿಸಬೇಕು ಎಂದು ಪಟ್ಟು ಹಿಡಿದರು.

ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ಮುಂದುವರೆದ ಸಸ್ಪೆನ್ಸ್‌, ಜನರಲ್ಲಿ ಹೆಚ್ಚಿದ ಕುತೂಹಲ, ರಾಜಕೀಯ ಲೆಕ್ಕಾಚಾರ ಚುರುಕು

ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ (Protest) ನಡೆಸಿ ಈಶ್ವರಪ್ಪ ಪರವಾಗಿ ಅಭಿಮಾನಿಗಳು ಘೋಷಣೆ ಕೂಗಿದರು. ಬಳಿಕ ಕಚೇರಿ ಮುಂದಿನ ರಸ್ತೆಯಲ್ಲಿ ವಾಹನಗಳನ್ನು ತಡೆದು ರಸ್ತೆ ತಡೆ ನಡೆಸಿದರು. ಇದರಿಂದ ಆ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಕೆಲವು ಕಾರ್ಯಕರ್ತರು ಬಿಜೆಪಿ ಕಚೇರಿ ಮುಂಭಾಗ ಟೈರ್‌ಗೆ ಬೆಂಕಿ ಹಚ್ಚಲು ಯತ್ನಿಸಿದರು. ಆದರೆ ಹಿರಿಯ ಕಾರ್ಯಕರ್ತರು ಯುವಕರನ್ನು ತಡೆದು, ಪಕ್ಷದ ಕಚೇರಿ ಮುಂದೆ ಬೆಂಕಿ ಹಚ್ಚುವುದು ಸರಿಯಲ್ಲ ಎಂದು ಸಮಾಧಾನಪಡಿಸಿದರು.

ಮೋರ್ಚಾಗಳಿಗೆ ರಾಜೀನಾಮೆ

ಇನ್ನು, ಶಿವಮೊಗ್ಗ ಬಿಜೆಪಿಯ ವಿವಿಧ ಜವಾಬ್ದಾರಿಗಳಿಗೆ ಈಶ್ವರಪ್ಪ ಅವರ ಅಭಿಮಾನಿಗಳು ರಾಜೀನಾಮೆ ನೀಡಿದರು. ರಾಜೀನಾಮೆ ಪತ್ರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದ ಅಭಿಮಾನಿಗಳನ್ನು ಹಿರಿಯ ಮುಖಂಡರು ಸಭೆ ನಡೆಸಿ ಸಮಾಧಾನಪಡಿಸಲು ಯತ್ನಿಸಿದರು. ಆದರೆ ಇದ್ಯಾವುದಕ್ಕೂ ಒಪ್ಪದ ಈಶ್ವರಪ್ಪ ಅವರ ಬೆಂಬಲಿಗರು ರಾಜೀನಾಮೆ ಪತ್ರ ನೀಡಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 12, 2023

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

Leave a Comment