ಶಿವಮೊಗ್ಗದಿಂದ ಜೀರೋ ಟ್ರಾಫಿಕ್‌ನಲ್ಲಿ ವಿಶೇಷ ಆಂಬುಲೆನ್ಸ್‌ನಲ್ಲಿ ಡಾ.ವಿನಯ್ ಬೆಂಗಳೂರಿಗೆ ಶಿಫ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 APRIL 2023

SHIMOGA : ನ್ಯಾಮತಿ ತಾಲೂಕು ಜೀನಹಳ್ಳಿಯಲ್ಲಿ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ತುತ್ತಾಗಿದ್ದ ಸಕ್ರೆಬೈಲು ಬಿಡಾರದ ವೈದ್ಯ ಡಾ.ವಿನಯ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವಿಶೇಷ ಆಂಬುಲೆನ್ಸ್ ಮೂಲಕ ಜೀರೋ ಟ್ರಾಫಿಕ್‍ನಲ್ಲಿ (Zero Traffic) ಡಾ.ವಿನಯ್‍ ಅವರನ್ನು ಶಿಫ್ಟ್‍ ಮಾಡಲಾಗುತ್ತಿದೆ.

Dr-Vinay-Shifted-to-Bangalore-from-Nanjappa-Hospital-in-Zero-Traffic

ಕಾಡಾನೆ ದಾಳಿಗೆ ಡಾ.ವಿನಯ್‍ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಅವರನ್ನು ಬೆಂಗಳೂರಿನ (Zero Traffic) ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.

ವಿಶೇಷ ಆಂಬುಲೆನ್ಸ್ ವ್ಯವಸ್ಥೆ

ಡಾ.ವಿನಯ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ವಿಶೇಷ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಇವತ್ತು ಬೆಳಗ್ಗೆ ಡಾ.ವಿನಯ್ ಅವರನ್ನು ನಂಜಪ್ಪ ಆಸ್ಪತ್ರೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಕ್ರಿಯೆ ನಡೆಯಿತು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ, ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು.

ಜೀರೋ ಟ್ರಾಫಿಕ್ ವ್ಯವಸ್ಥೆ

ಡಾ.ವಿನಯ್ ಅವರನ್ನು ತುರ್ತಾಗಿ ಬೆಂಗಳೂರು ಆಸ್ಪತ್ರೆಗೆ ಕರೆದೊಯ್ಯಬೇಕಿದೆ. ಈ ಹಿನ್ನೆಲೆ ಸರ್ಕಾರದ ವತಿಯಿಂದ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿದೆ. ಆಂಬುಲೆನ್ಸ್ ಮುಂದೆ ಪೊಲೀಸ್ ವಾಹನವನ್ನು ನಿಯೋಜನೆ ಮಾಡಲಾಗಿದೆ. ಆಂಬುಲೆನ್ಸ್ ತೆರಳುವ ಸಂದರ್ಭ ನಂಜಪ್ಪ ಆಸ್ಪತ್ರೆ ಬಳಿ ಕೆಲವು ಕ್ಷಣ ವಾಹನಗಳನ್ನು ನಿಲ್ಲಿಸಲಾಗಿತ್ತು.

ಇದನ್ನೂ ಓದಿ – ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ

ಕಾರ್ಯಾಚರಣೆ ವೇಳೆ ಆನೆ ದಾಳಿ

ಚನ್ನಗಿರಿ ತಾಲೂಕು ಸೂಳೆಕೆರೆ ಬಳಿ ಕಾಡಾನೆಯೊಂದು ಬಾಲಕಿಯನ್ನು ತುಳಿದು ಸಾಯಿಸಿತ್ತು. ಆನೆಯನ್ನು ಅರೆ ಪ್ರಜ್ಞಾವಸ್ಥೆಗೆ ತಳ್ಳುವ ಮತ್ತು ಬರುವ ಇಂಜೆಕ್ಷನ್ ಡಾರ್ಟ್‍ ಮಾಡುವ ಪ್ರಕ್ರಿಯೆ ವೇಳೆ ಕಾಡಾನೆ ಡಾ. ವಿನಯ್ ಅವರ ಮೇಲೆ ದಾಳಿ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಡಾ.ವಿನಯ್ ಅವರನ್ನು ಶಿವಮೊಗ್ಗದ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 13, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment