ಹೊಳಲೂರು ಸೇತುವೆ ಬಳಿ ಹಿಟ್ ಅಂಡ್ ರನ್ ಅಪಘಾತ, ದಂಪತಿ ಆಸ್ಪತ್ರೆಗೆ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 APRIL 2023

SHIMOGA : ರಸ್ತೆ ಬದಿ ನಡೆದು ಹೋಗುತ್ತಿದ್ದ ದಂಪತಿಗೆ (Couple) ಬೈಕ್ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ACCIDENT-NEWS-GENERAL-IMAGE.

ಆನವೇರಿ ಗ್ರಾಮದ ಎಸ್‍.ಎಂ.ವಲ್ಲಿ ಮತ್ತು ಆತನ ಪತ್ನಿ ನಜ್ಮಾ ಬಾನು ಗಾಯಾಳುಗಳು. ಹೊಳಲೂರು ಆಸ್ಪತ್ರೆಗೆ ನಡೆದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಹೊಳಲೂರು ಹೊಸ ಸೇತುವೆ ದಾಟಿ ಸ್ವಲ್ಪ ಮುಂದೆ ಹೋಗುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಇಬ್ಬರನ್ನು (Couple) ಕೂಡಲೆ ಮೆಗ್ಗಾನ್ ಅಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ದಂಪತಿಯನ್ನು ಪ್ರತ್ಯೇಕ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಬಸವನಗಂಗೂರು ಸೇತುವೆ ಬಳಿ ಬೈಕ್ ಸವಾರನ ಮೇಲೆ ರಾಡ್‌ನಿಂದ ಹಲ್ಲೆ, ಗಂಭೀರ ಗಾಯ, ಘಟನೆಗೇನು ಕಾರಣ?

ಘಟನೆ ಬಳಿಕ ಬೈಕ್ ಸವಾರ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 14, 2023

Leave a Comment