SHIVAMOGGA LIVE NEWS | 16 APRIL 2023
SHIMOGA : ಕಂಬದ ಮೇಲೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ (Shock) ಲೈನ್ ಮ್ಯಾನ್ ಒಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಹಾಲಸ್ವಾಮಿ (27) ಎಂದು ಗುರುತಿಸಲಾಗಿದೆ.
ಹೇಗಾಯ್ತು ಘಟನೆ?
ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್‍ನಲ್ಲಿ ವಿದ್ಯತ್ ಲೈನ್ ದುರಸ್ಥಿ ಕಾರ್ಯ ನಡೆಯುತ್ತಿತ್ತು. ಲೈನ್ ಮ್ಯಾನ್ ಹಾಲಸ್ವಾಮಿ ಅವರು ಕಂಬದ ಮೇಲೆ ಹತ್ತಿ ರಿಪೇರಿ ಕೆಲಸ ಮಾಡತ್ತಿದ್ದರು. ಈ ವೇಳೆ ದಿಢೀರ್ ವಿದ್ಯುತ್ ಪ್ರವಹಿಸಿದೆ. ಶಾಕ್ (Shock) ಹೊಡೆದು ಹಾಲಸ್ವಾಮಿ ಅವರು ಕಂಬದಿಂದ ಕೆಳಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗಾಗಲೆ ಅವರು ಅಸುನೀಗಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಒಬ್ಬ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ
ಸೂಕ್ತ ರಕ್ಷಣಾ ಸಾಮಗ್ರಿಗಳು, ಸುರಕ್ಷತಾ ಕ್ರಮ ಕೈಗೊಳ್ಳದೆ ಎತ್ತರದ ಜಾಗದಲ್ಲಿ ಕೆಲಸ ನಿರ್ವಹಿಸುವಂತೆ ಮಾಡಿದ್ದರಿಂದಲೇ ಘಟನೆ ಸಂಭವಿಸಿದೆ ಎಂದು ಹಾಲಸ್ವಾಮಿ ಅವರ ಕುಟುಂಬದವರು ಆರೋಪಿಸಿದ್ದಾರೆ. ಘಟನೆ ಸಂಬಂಧ ಮೆಸ್ಕಾಂ ಜೆಇ, ಎಇಇ ಸೇರಿದಂತೆ ಹಲವರು ವಿರುದ್ಧ ಕುಟುಂಬದವರು ದೂರು ನೀಡಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.