ಬಿಜೆಪಿ ಟಿಕೆಟ್ ಬರ್ತಾ ಇದೆ.. ಬರ್ತಾ ಇದೆ.. ಬರ್ತಾ ಇದೆ.. ಅಭ್ಯರ್ಥಿ ಆಯ್ಕೆ ವಿಚಾರ ಟ್ರೋಲ್, ಎಲ್ಲೆಡೆ ವೈರಲ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 APRIL 2023

SHIMOGA : ನಾಮಪತ್ರ ಸಲ್ಲಿಸಲು ಇನ್ನೆರಡೆ ದಿನ ಬಾಕಿ. ಆದರೆ ಶಿವಮೊಗ್ಗ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಪ್ರಕಟಿಸದಿರುವುದು ಟ್ರೋಲ್‍ಗೆ (trolled) ಒಳಗಾಗಿದೆ. ನಾನಾ ಬಗೆಯ ಟ್ರೋಲ್‍ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ಮುಖಂಡರನ್ನು ಮುಜುಗರಕ್ಕೀಡು ಮಾಡಿದೆ.

BJP-Ticket-matter-trolled-in-Shimoga

ಸಾಲು ಸಾಲು ಟ್ರೋಲ್‍ಗಳು

ಹಾಸ್ಯ ನಟ ಸಾಧು ಕೋಕಿಲಾ ಅವರ ‘ಬರ್ತಾ ಇದೆ.. ಬರ್ತಾ ಇದೆ.. ಬರ್ತಾ ಇದೆ..’ ಕಾಮಿಡಿಯನ್ನು ಬಿಜೆಪಿ ಟಿಕೆಟ್ ವಿಚಾರಕ್ಕೆ ಬಳಸಿಕೊಂಡು ಟ್ರೋಲ್ (trolled)  ಮಾಡಲಾಗುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಟ್ಸಪ್ ಗ್ರೂಪುಗಳು, ಸ್ಟೇಟಸ್‍ನಲ್ಲಿಯು ರಾರಾಜಿಸುತ್ತಿದೆ.

ಇನ್ನು, ‘ಪಕ್ಷನಿಷ್ಠೆಯ ಕಾರಣಕ್ಕೆ ಈಶ್ವರಪ್ಪ ಅವರಿಗೆ ಮತ್ತೆ ಟಿಕಟ್ ಕೊಡುತ್ತಾರಂತೆ’, ‘ಇಡೀ ಶಿವಮೊಗ್ಗದಲ್ಲಿ ಎಲ್ಲಾ ಕಡೆ ಕೇಳಿ ಬರುತ್ತಿರುವ ಪ್ರಶ್ನೆ ಒಂದೇ, ಟಿಕೆಟ್ ಯಾರಿಗೆ?’, ‘ನಾಮಪತ್ರ ಸಲ್ಲಿಸಲು ಉಳಿದಿರೋದು ಎರಡೆ ದಿನ. ಹಾಗಾಗಿ ಅಫಿಡವಿಟ್ ಮಾಡಿಸಲಾಗದೆ ಬಿಜೆಪಿ ಅಭ್ಯರ್ಥಿಯನ್ನೇ ಹಾಕುತ್ತಿಲ್ಲ’, ‘ಕಾಂಗ್ರೆಸ್ ಜೊತೆಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆಯಂತೆ’ ಎಂದೆಲ್ಲ ಟ್ರೋಲ್ ಆಗುತ್ತಿದೆ.

shivamogga live news whatsappa number

ಲೇವಡಿ ಮಾಡುತ್ತಿದ್ದರು ಈಶ್ವರಪ್ಪ

ಮುಂಚೆ ಉಳಿದೆಲ್ಲ ಪಕ್ಷಗಳಿಗಿಂತಲು ಮೊದಲು ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸುತ್ತಿತ್ತು. ಆಗೆಲ್ಲ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಉಳಿದ ಪಕ್ಷಗಳನ್ನು ಲೇವಡಿ ಮಾಡುತ್ತಿದ್ದರು. ಅಭ್ಯರ್ಥಿಗಳನ್ನು ಪ್ರಕಟಿಸಲಾಗದಿದ್ದವರು ಇನ್ನು ಚುನಾವಣೆಯನ್ನು ಗೆಲ್ಲುತ್ತಾರೆಯೇ ಎಂದು ಟೀಕಿಸುತ್ತಿದ್ದರು. ಆದರೆ ಈ ಬಾರಿ ಅವರದ್ದೇ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಸರು ಪ್ರಕಟಿಸಲು ವಿಳಂಬವಾಗಿದೆ. ನಾಮಪತ್ರ ಸಲ್ಲಿಸಲು ಇನ್ನೆರಡೆ ದಿನ ಬಾಕಿ ಇದ್ದಾಗಲೂ ಅಭ್ಯರ್ಥಿ ಯಾರು ಅನ್ನುವದು ಕಾರ್ಯಕರ್ತರಿಗೇ ಗೊಂದಲವಾಗಿದೆ.

ಸಂಭಾವ್ಯರ ಪಟ್ಟಿ ಬೆಳೆಯುತ್ತಲೇ ಇದೆ

ಬಿಜೆಪಿಯಲ್ಲಿ ಸಂಭಾವ್ಯವರ ಪಟ್ಟಿ ದಿನೇ ದಿನೆ ಬೆಳೆಯುತ್ತಲೆ ಇದೆ. ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ, ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ, ದಂತ ವೈದ್ಯ ಡಾ.ರವಿಕಿರಣ್, ಕಾರ್ಪೊರೇಟರ್ ಎಸ್‍.ಎನ್.ಚನ್ನಬಸಪ್ಪ ಸೇರಿದಂತೆ ಹಲವು ಹೆಸರುಗಳು ಕೇಳಿ ಬರುತ್ತಿದೆ. ಈಶ್ವರಪ್ಪ ಅವರಿಗೇ ಪುನಃ ಟಿಕೆಟ್ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹೀಗೆ ಸಂಭಾವ್ಯರ ಪಟ್ಟಿ ದೊಡ್ಡದಾಗುತ್ತಲೆ ಇದೆ.

160423 SN Channabasappa poster goes viral

ನಾಮಪತ್ರ ಸಲ್ಲಿಸುವ ದಿನಾಂಕ ಪ್ರಕಟಿಸಿದ್ದರು..!

ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ ಅವರು ಬಿಜೆಪಿ ಅಭ್ಯರ್ಥಿ ಎಂಬ ಪೋಸ್ಟರ್ ವೈರಲ್ ಆಗಿತ್ತು. ಏ.18ರಂದು ಚನ್ನಬಸಪ್ಪ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸೇರಬೇಕು ಎಂಬ ಸಂದೇಶಗಳು ಹರಿದಾಡಿದವು. ಕೊನೆಗೆ ಇದು ಸುಳ್ಳು ಸಂದೇಶ ಎಂದು ಬಿಜೆಪಿ ಮುಖಂಡರು ಸ್ಪಷ್ಟನೆ ನೀಡಬೇಕಾದ ಅನಿವಾರ್ಯತೆ ಎದುರಾಯಿತು.

ಒಟ್ಟಿನಲ್ಲಿ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಕುರಿತ ವಿಷಯ ಟ್ರೋಲಿಗರಿಗೆ ಆಹಾರವಾಗಿದೆ. ದಿನಕ್ಕೊಂದು ಹೊಸ ಬಗೆಯ ಟ್ರೋಲ್‍ಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುವಂತಾಗಿದೆ. ಜನರಿಗೆ ಮನರಂಜನೆಯಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 19, 2023

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment