ತೀರ್ಥಹಳ್ಳಿಯ ರೈತನ ಮಗಳು ರಾಜ್ಯಕ್ಕೆ ಸಕೆಂಡ್‌ ರ‍್ಯಾಂಕ್‌, ಶಿವಮೊಗ್ಗದ ನೇಹಶ್ರೀ 3ನೇ ರ‍್ಯಾಂಕ್‌, ಜಿಲ್ಲೆಗೆ ಎಷ್ಟನೆ ಸ್ಥಾನ ಸಿಕ್ಕಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 APRIL 2023

SHIMOGA : ದ್ವಿತೀಯ ಪಿಯುಸಿ ಫಲಿತಾಂಶ (Second PUC) ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕ ಪಡೆದವರ ಸಾಲಿನಲ್ಲಿದ್ದಾರೆ.

Thirthahalli-Anvitha-gets-second-rank-Second-PUC-Commerce

ರೈತನ ಮಗಳು ರಾಜ್ಯಕ್ಕೆ ಸಕೆಂಡ್‌ ರ‍್ಯಾಂಕ್‌

ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್‌ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಅನ್ವಿತಾ.ಡಿ.ಎನ್‌ ಅವರು 600ಕ್ಕೆ 596 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಎರಡನೆ ರ‍್ಯಾಂಕ್‌ (Second PUC) ಪಡೆದಿದ್ದಾರೆ. ರಾಜ್ಯದಲ್ಲಿ ಒಂಭತ್ತು ವಿದ್ಯಾರ್ಥಿಗಳು 596 ಅಂಕಗಳನ್ನು ಗಳಿಸಿದ್ದಾರೆ.

ಅನ್ವಿತಾ.ಡಿ.ಎನ್‌ ಅವರು ತೀರ್ಥಹಳ್ಳಿ ತಾಲೂಕು ಮಲ್ಲೇಸರ ಗ್ರಾಮದವರು. ತಂದೆ ನಾಗರಾಜ ಅವರು ಕೃಷಿಕರು. ತಾಯಿ ಅನುಸೂಯ. ಮಗಳು ರ‍್ಯಾಂಕ್‌ ಪಡೆದ ವಿಚಾರ ತಿಳಿದು ಖುಷಿಯಾಗಿದ್ದಾರೆ.

ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಅನ್ವಿತಾ.ಡಿ.ಎನ್‌ ಅವರು, ʼಕಾಲೇಜಿನ ಉಪನ್ಯಾಸಕರು ಸಪೋರ್ಟಿವ್‌ ಆಗಿದ್ದರು. ಯಾವುದೆ ಸಂದೇಹಗಳಿದ್ದರು ಕೇಳಿದಾಗಲೆ ಅದನ್ನು ಬಗೆಹರಿಸುತ್ತಿದ್ದರು. ಇನ್ನು, ಆಯಾ ದಿನದ ಪಾಠಗಳನ್ನು ಅಂದೇ ವರ್ಕ್‌ ಮಾಡುತ್ತಿದ್ದೆ. ಊರಿನಿಂದ ಓಡಾಡುವುದು ಕಷ್ಟ. ಹಾಗಾಗಿ ವಿಕಾಸ ಕಾಲೇಜಿನ ಹಾಸ್ಟೆಲ್‌ನಲ್ಲಿದ್ದೆ. ಅಲ್ಲಿಯುವ ಓದುವ ವಾತಾವರಣ ಇದೆ. ಹಾಗಾಗಿ ಓದಲು ತುಂಬಾ ಅನುಕೂಲವಾಯಿತು. ಹೆಚ್ಚು ಅಂಕ ಪಡೆದ ವಿಚಾರ ತಿಳಿದು ಅಪ್ಪ, ಅಮ್ಮ ತುಂಬಾ ಖುಷಿಯಾಗಿದ್ದಾರೆ. ಮುಂದೆ ಯುಪಿಎಸ್‌ಸಿ ಪರೀಕ್ಷೆ ತೆಗೆದುಕೊಳ್ಳಬೇಕು ಎಂಬ ಯೋಚನೆ ಇದೆ.ʼ ಎಂದು ತಿಳಿಸಿದರು.

ಶಿವಮೊಗ್ಗದ ವಿದ್ಯಾರ್ಥಿನಿಗೆ ಮೂರನೇ ಸ್ಥಾನ

ಶಿವಮೊಗ್ಗದ ಕುವೆಂಪು ನಗರದ ಎಸ್‌.ವಿ.ಇ.ಟಿ ಸ್ವತಂತ್ರ ಪಿಯು ಕಾಲೇಜಿನ ನೇಹಶ್ರೀ ಅವರು 600 ಅಂಕಗಳಿಗೆ 595 ಅಂಕ ಗಳಿಸಿದ್ದಾರೆ. ರಾಜ್ಯಕ್ಕೆ ಮೂರನೇ ರ‍್ಯಾಂಕ್‌ ಪಡೆದಿದ್ದಾರೆ. ರಾಜ್ಯದಲ್ಲಿ ಒಟ್ಟು 13 ವಿದ್ಯಾರ್ಥಿಗಳು ಈ 595 ಅಂಕ ಗಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಎಸ್‌.ವಿ.ಇ.ಟಿ ಸ್ವತಂತ್ರ ಪಿಯು ಕಾಲೇಜಿನಲ್ಲಿ ಉಪನ್ಯಾಸಕರು, ಸಿಬ್ಬಂದಿ ನೇಹಶ್ರೀ ಅವರಿಗೆ ಅಭಿನಂದನೆ ಸಲ್ಲಿಸಿದರು.

shivamogga live news whatsappa number

ನೇಹಶ್ರೀ ಅವರ ತಂದೆ ಜಯಂತ್‌ ಕುಮಾರ್‌ ಅವರು ಬಿ.ಆರ್‌.ಪಿಯ ರಾಷ್ಟ್ರೀಯ ಪಿಯು ಕಾಲೇಜಿನ ಎಸ್‌.ಡಿ.ಎ ಆಗಿದ್ದಾರೆ. ತಾಯಿ ಚಂದನಾ.ಎಸ್.ಬಿ.

ಇದನ್ನೂ ಓದಿ – ಶಿವಮೊಗ್ಗದ ವಿವಿಧೆಡೆ ಚುನಾವಣಾ ಚೆಕ್‌ಪೋಸ್ಟ್‌ಗಳು ಪಲ್ಟಿ, ಸಿಸಿಟಿವಿಗಳು ಹಾನಿ

ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ನೇಹಶ್ರೀ ಅವರ ತಂದೆ ಜಯಂತ್‌ ಕುಮಾರ್‌ ಅವರು, ʼನೇಹಶ್ರೀ ಅವರು ಯಾವುದೆ ಒತ್ತಡವಿಲ್ಲದೆ ನಿತ್ಯ ಓದುತ್ತಿದ್ದಳು. ಅವರ ಶಿಕ್ಷಕರಿಗೆ ಮೊದಲು ಧನ್ಯವಾದ ತಿಳಿಸುತ್ತೇನೆ. ಮುಂದೆ ಸಿಎ ಓದಬೇಕು ಅಂದುಕೊಂಡಿದ್ದಾಳೆʼ ಎಂದು ತಿಳಿಸಿದರು.

ಶಿವಮೊಗ್ಗಕ್ಕೆ 8ನೇ ಸ್ಥಾನ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ 8ನೇ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಶೇ.83.13ರಷ್ಟು ಫಲಿಶಾಂತ ಬಂದಿದೆ. ಕಳೆದ ಬಾರಿ ಶೇ.70.14ರಷ್ಟು ಫಲಿತಾಂಶದೊಂದಿಗೆ ಎಂಟನೆ ಸ್ಥಾನದಲ್ಲಿಯೇ ಇತ್ತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 21, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment