SHIVAMOGGA LIVE NEWS | 18 APRIL 2023
SHIMOGA : ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿದ್ದ ಸಂಕಷ್ಟ ನಿವಾರಣೆಯಾಗಿದೆ. ಬಂಡಾಯ ಅಭ್ಯರ್ಥಿಗಳು ಸೇರಿ ಮೂವರು ಅಭ್ಯರ್ಥಿಗಳು ನಾಮಪತ್ರ (Nomination) ಹಿಂದಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಯಾರೆಲ್ಲ ನಾಮಪತ್ರ ಹಿಂಪಡೆದಿದ್ದಾರೆ?
ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಸಿಗದೆ ಇದ್ದಿದ್ದರಿಂದ ವಿ.ನಾರಾಯಣ ಸ್ವಾಮಿ ಮತ್ತು ಎಸ್.ರವಿಕುಮಾರ್ ಅವರು ಬಂಡಾಯವೆದ್ದಿದ್ದರು. ಸ್ವತಂತ್ರವಾಗಿ ಸ್ಪರ್ಧಿಸಲು ಇಬ್ಬರು ನಾಮಪತ್ರ (Nomination) ಸಲ್ಲಿಸಿದ್ದರು. ಆದರೆ ಮುಖಂಡರು ಮನವೊಲಿಸಿದ್ದರಿಂದ ಇಬ್ಬರು ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಶ್ರೀನಿವಾಸ ಕರಿಯಣ್ಣ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.
ಇನ್ನು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಸ್.ಕೃಷ್ಣ ಎಂಬುವವರು ಕೂಡ ತಮ್ಮ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ.

ಕಣದಲ್ಲಿ ಯಾರೆಲ್ಲ ಇದ್ದಾರೆ?
ಬಿಜೆಪಿಯ ಕೆ.ಬಿ.ಅಶೋಕ್ ನಾಯ್ಕ್, ಜೆಡಿಎಸ್ ಪಕ್ಷದ ಶಾರದಾ ಪೂರ್ಯಾನಾಯ್ಕ್, ಕಾಂಗ್ರೆಸ್ ಪಕ್ಷದ ಡಾ.ಶ್ರೀನಿವಾಸ ಕರಿಯಣ್ಣ, ಎಎಪಿಯ ಎಸ್.ಎಸ್.ಮಂಜುನಾಥ, ಬಿಎಸ್ಪಿಯ ಎ.ಡಿ.ಶಿವಪ್ಪ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೆ.ಬಿ.ವಿಜಯಾ, ಕರ್ನಾಟಕ ರಾಷ್ಟ್ರ ಸಮಿತಿಯ ನಿರಂಜನ.ಈ, ಸ್ವತಂತ್ರ ಅಭ್ಯರ್ಥಿಗಳಾದ ರಂಗಸ್ವಾಮಿ.ಎಲ್, ತಿಪ್ಪೆರುದ್ರಸ್ವಾಮಿ.ಟಿ, ಭೀಮಪ್ಪ.ಬಿ.ಹೆಚ್, ಪ್ರವೀಣ್ ನಾಯ್ಕ್ ಅವರು ಕಣದಲ್ಲಿದ್ದಾರೆ.
ಇದನ್ನೂ ಓದಿ – ಸಿಗಂದೂರಿಗೆ ತೆರಳುತ್ತಿದ್ದ ಬಸ್ ಪಲ್ಟಿ, ಮಹಿಳೆ ಸಾವು, ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





