ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 APRIL 2023
RIPPONPETE : ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ (Bee Attack) ನಡೆಸಿದ್ದು 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.

ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಘಟನೆ ಸಂಭವಿಸಿದೆ. ಕಾಲೇಜು ಕಾರಿಡಾರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಘಟನೆಯಲ್ಲಿ 7 ವಿದ್ಯಾರ್ಥಿಗಳು, 6 ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರನ್ನು ಕೂಡಲೆ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು.
ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದು ಅವರನ್ನು ಮನೆಗೆ ಕಳುಹಿಸಲಾಗಿದೆ. ರಜೆ ಬಳಿಕ ಸೋಮವಾರ ಕಾಲೇಜು ಪುನಾರಂಭವಾಗಿತ್ತು. ಈ ವೇಳೆ ಕಾರಿಡಾರ್‌ನಲ್ಲಿ ಓಡಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ (Bee Attack) ನಡೆಸಿವೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕ್ ವೀಲಿಂಗ್ ವಿಡಿಯೋ ವೈರಲ್, ಡೇಂಜರಸ್ ಸ್ಟಂಟ್ ಮಾಡಿದವನಿಗೆ ಪೊಲೀಸ್ ವಾರ್ನಿಂಗ್

LATEST NEWS
- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















