ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 APRIL 2023
SHIMOGA : ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರಿಗೆ ಮಂಡೆನಕೊಪ್ಪ ತಾಂಡಾದಲ್ಲಿ (Tanda) ಪ್ರತಿಭಟನೆಯ ಬಿಸಿ ತಟ್ಟಿದೆ. ಪ್ರಚಾರ ಭಾಷಣ ಮಾಡದೆಯೆ ಗೃಹ ಸಚಿವರು ಹಿಂತಿರುಗುವಂತಾಯಿತು.
ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ ತಾಲೂಕಿನ ಮಂಡನೆಕೊಪ್ಪ ತಾಂಡಾದಲ್ಲಿ (Tanda) ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಚಾರಕ್ಕೆ ತೆರಳಿದ್ದರು. ಗ್ರಾಮದ ದುರ್ಗಾದೇವಿ ದೇವಸ್ಥಾನದ ಬಳಿ ಆರಗ ಜ್ಞಾನೇಂದ್ರ ಅವರಿಗೆ ಮುತ್ತಿಗೆ ಹಾಕಿದ ಯುವಕರು ಘೋಷಣೆಗಳನ್ನು ಕೂಗಿದರು.
ಒಳ ಮೀಸಲಾತಿ ವರ್ಗಿಕರಣ ವಿಚಾರವಾಗಿ ಬಿಜೆಪಿ ಸರ್ಕಾರದ ನಡೆ, ನ್ಯಾ. ಎ.ಜೆ.ಸದಾಶಿವ ಆಯೋಗ ವರದಿ ಜಾರಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದನ್ನು ಖಂಡಿಸಿ ಯುವಕರು ಘೋಷಣೆ ಕೂಗಿದರು. ಯುವಕರನ್ನು ಸಮಾಧಾನಪಡಿಸುವ ಪ್ರಯತ್ನ ವಿಫಲವಾದ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಚಾರ ಭಾಷಣ ಮಾಡದೆ ಹಿಂತಿರುಗಿದರು.
ವಿಜಯೇಂದ್ರಗೂ ತಟ್ಟಿದ್ದ ಬಿಸಿ
ಶಿಕಾರಿಪುರದಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರಿಗೂ ತಾಂಡಾದಲ್ಲಿ ಒಳ ಮೀಸಲು ಬಿಸಿ ತಟ್ಟಿತ್ತು. ತಾಲೂಕಿನ ತರ್ಲಘಟ್ಟ ತಾಂಡಾದಲ್ಲಿ ಗ್ರಾಮಸ್ಥರು ಘೋಷಣೆಗಳನ್ನು ಕೂಗಿದ್ದರು. ಇದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
ಇದನ್ನೂ ಓದಿ – ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, 13 ವಿದ್ಯಾರ್ಥಿಗಳು ಆಸ್ಪತ್ರೆಗೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422