ಮನೆಯಿಂದಲೇ ಮತದಾನ ಆರಂಭ, ಸೊರಬದಲ್ಲಿ ಹಕ್ಕು ಚಲಾಯಿಸಿದ ಹಿರಿಯ ನಾಗರಿಕ, ಹೇಗಿತ್ತು ವ್ಯವಸ್ಥೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 APRIL 2023

SORABA : ಮತಗಟ್ಟೆಗೆ ಬಂದು ಮತ ಚಲಾಯಿಸಲು ಸಾಧ್ಯವಾಗದವರಿಗೆ ಮನೆಯಿಂದಲೆ ಮತದಾನ (Vote from Home) ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಈ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಸೊರಬದ ಚಿಕ್ಕಪೇಟೆ ನಿವಾಸಿ ಕೃಷ್ಣಭಟ್‌ ಗೋಖಲೆ ಮೊದಲ ಮತ ಚಲಾಯಿಸಿದರು.

Voting-from-home-Soraba

ಈ ಕುರಿತು ಚುನಾವಣಾಧಿಕಾರಿ ಪ್ರವೀಣ್ ಜೈನ್ ಮಾಹಿತಿ ನೀಡಿ, ಕ್ಷೇತ್ರದ 10 ಮಾರ್ಗಗಳನ್ನು ಗುರುತಿಸಲಾಗಿದೆ. 162 ಮಂದಿ 80 ವರ್ಷ ಮೇಲ್ಪಟ್ಟವರು ಮತ್ತು  82 ಮಂದಿ ಅಂಗವಿಕಲರು ಸೇರಿದಂತೆ ಒಟ್ಟು 244 ಮಂದಿ ಮತದಾನ ಮಾಡಲಿದ್ದಾರೆ. ಮನೆಯಲ್ಲಿಯೇ ಮತಗಟ್ಟೆ (Vote from Home) ಸ್ಥಾಪಿಸಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಒಂದನೇ ಮತಗಟ್ಟೆ ಅಧಿಕಾರಿ, ಎರಡನೇ ಮತಗಟ್ಟೆ ಅಧಿಕಾರಿ, ಒಬ್ಬರು ಮೈಕ್ರೋ ಅಬ್ಸರ್ವರ್, ಒಬ್ಬರು ಕ್ಯಾಮರಾಮನ್ ಹಾಗೂ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ಸ್ಥಳೀಯವಾಗಿ ಬಿಎಲ್‌ಒ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಸಹಕಾರ ಮಾಡಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ – ಹೊಂಬುಜ ಮಠದಲ್ಲಿ ವಾರ್ಷಿಕ ಪೂಜಾ ಮಹೋತ್ಸವ, 108 ಕಳಾಶಾಭಿಷೇಕ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment