ಲೈಂಗಿಕ ಕಿರುಕುಳ ಆರೋಪ ಸಾಬೀತು, ಯುವಕನಿಗೆ ಜೈಲು, ದಂಡ, ಎಷ್ಟು ವರ್ಷ ಜೈಲು ಶಿಕ್ಷೆ? ದಂಡ ಎಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 APRIL 2023

SHIMOGA : ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸಾಬೀತಾದ ಹಿನ್ನೆಲೆ ಯುವಕನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ಕು ವರ್ಷ ಸಾದಾ ಶಿಕ್ಷೆ (Imprisonment) ಮತ್ತು 20 ಸಾವಿರ ರೂ. ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲನಾದರೆ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

prison hand cuff image

ಏನಿದು ಪ್ರಕರಣ?

2020ರಲ್ಲಿ ತೀರ್ಥಹಳ್ಳಿ ತಾಲೂಕಿನ 20 ವರ್ಷದ ಯುವತಿಗೆ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಯುವತಿ ಮಾಳೂರು ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರದ ದೂರು ನೀಡಿದ್ದಳು. ತನಿಖೆ ನಡೆಸಿದ ತನಿಖಾಧಿಕಾರಿ ಪ್ರವೀಣ್‌ ನೀಲಮ್ಮನವರ್‌ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ –  ಶಿವಮೊಗ್ಗ ಜೈಲಿನ ಸೆಲ್‌ನಲ್ಲಿ ನೇಣು ಬಿಗಿದುಕೊಂಡ ಕೈದಿ, ಯಾರದು? ಜೈಲಿಗೆ ಹೋಗಿದ್ದೇಕೆ?

ವಿಚಾರಣೆ ನಡೆಸಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಯುವಕನಿಗೆ ಶಿಕ್ಷೆ (Imprisonment) ವಿಧಿಸಿ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಸುರೇಶ್‌ ಕುಮಾರ್‌ ವಾದ ಮಂಡಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗ ಜೈಲಿನಿಂದ ಪೊಲೀಸ್‌ ಭದ್ರತೆಯಲ್ಲಿ ಭದ್ರಾವತಿ ಠಾಣೆಗೆ ತೆರಳಿ ದೂರು ನೀಡಿದ ಕೈದಿ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment