ಶಿವಮೊಗ್ಗ ಲೈವ್.ಕಾಂ | 15 ಮೇ 2019
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್, ಕಾಂಗ್ರೆಸ್ ಪಕ್ಷ ನಿರ್ಧರಿಸಿವೆ. ಇದಕ್ಕೆ ವರಿಷ್ಠರಿಂದಲೂ ಒಪ್ಪಿಗೆ ಸಿಕ್ಕಿರುವುದರಿಂದ, ಸ್ಥಳೀಯ ಅಗತ್ಯಕ್ಕೆ ಅನುಗುಣವಾಗಿ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.
ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಒಂದೆರಡು ಕಡೆ ಸಮಸ್ಯೆ ಆಗಬಹುದು. ಅದನ್ನು ಮುಖಂಡರು ಬಗೆಹರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮಾತನಾಡಿ, ಸ್ಥಳೀಯ ಅಗತ್ಯಕ್ಕನುಗುಣವಾಗಿ ಸೀಟು ಹಂಚಿಕೆ ಮಾಡಿಕೊಂಡು ಈಗಾಗಲೇ ಆಯಾ ಮುಖಂಡರ ಮುಂದಾಳತ್ವದಲ್ಲಿ ಪ್ರಚಾರ ಆರಂಭಿಸಲಾಗಿದೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ರಾಜ್ಯ ಮಟ್ಟದಲ್ಲಿ ಮೈತ್ರಿ ಇಲ್ಲದಿದ್ಧಾಗಲೂ ಜಿಲ್ಲಾ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲ ಆಗದಂತೆ ನೋಡಿಕೊಳ್ಳಲಿದ್ದೇವೆ ಎಂದರು.
ಮೇ 29ರಂದು ಶಿವಮೊಗ್ಗ ಜಿಲ್ಲೆಯ ಐದು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಸದ್ಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200