ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಸುತ್ತಮುತ್ತ ಮೇ 13ರ ಬೆಳಗ್ಗೆಯಿಂದ ನಿಷೇಧಾಜ್ಞೆ, ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 MAY 2023

SHIMOGA : ವಿಧಾನಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಸುತ್ತಮುತ್ತ ಮೇ 13ರ ಬೆಳಗ್ಗೆ 6 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ (Prohibition) ವಿಧಿಸಲಾಗಿದೆ. ಮೇ 13ರಂದು ಮತ ಎಣಿಕ ಕಾರ್ಯದ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಈ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ – ಮನೆ ಬಾಗಿಲು ಹಾಕಿದಂತೆಯೇ ಇತ್ತು, ರೂಮಿಗೆ ಹೋದಾಗ ಮಾಲೀಕನ ಕುಟುಂಬಕ್ಕೆ ಕಾದಿತ್ತು ಶಾಕ್

ನಿಷೇಧಾಜ್ಞೆ ಹಿನ್ನೆಲೆ ಸಹ್ಯಾದ್ರಿ ಕಾಲೇಜು ಬಳಿ 5ಕ್ಕಿಂತಲು ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ ಹಾಗೂ ಸಮಾವೇಶಗಳನ್ನು (Prohibition) ನಡೆಸುವಂತಿಲ್ಲ. ಮಾರಕಾಸ್ತ್ರ, ಸ್ಪೋಟಕಗಳನ್ನು ಈ ಭಾಗದಲ್ಲಿ ಕೊಂಡೊಯ್ಯುವಂತಿಲ್ಲ. ಅಣಕು ಶವ ಪ್ರದರ್ಶನ, ಸಂಭ್ರಮಾಚರಣೆ, ಘೋಷಣೆ ಕೂಗುವುದು, ವಾದ್ಯಗಳನ್ನು ಬಾರಿಸುವುದನ್ನು ನಿಷೇಧಿಸಲಾಗಿದೆ.

Admission Open for 2023-2024

ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ, ದೇವಸ್ಥಾನ, ಚರ್ಚ್‌, ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ, ಸಂಬಂಧಪಟ್ಟ ಪೊಲೀಸ್‌ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment