ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವಿರುದ್ಧ ಸಾಗರದಲ್ಲಿ ಎಫ್‌ಐಆರ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 MAY 2023

SHIMOGA : ಮಾಹಿತಿ ಹಕ್ಕು ಕಾರ್ಯಕರ್ತನಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಹಿನ್ನೆಲೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಈಗ ನ್ಯಾಯಾಲಯದ ಸೂಚನೆ ಮೇರೆಗೆ ಸಾಗರ ಪೊಲೀಸ್‌ ಠಾಣೆಯಲ್ಲಿ ಸಿ.ಎಸ್.ಷಡಾಕ್ಷರಿ ಅವರ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ತಾಳಗುಪ್ಪದ ಓಂಕಾರ.ಎಸ್‌.ಪಿ ಅವರು ಸಿ.ಎಸ್.ಷಡಾಕ್ಷರಿ ಅವರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಏನಿದು ಪ್ರಕರಣ?

ಜನವರಿ 12ರಂದು ಸಾಗರದ ಗಾಂಧಿ ಮೈದಾನದಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಿ.ಎಸ್.ಷಡಾಕ್ಷರಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಮಾತನಾಡುತ್ತ, ಓಂಕಾರ.ಎಸ್‌.ಪಿ ಅವರನ್ನು ಗುರಿಯಾಗಿಸಿಕೊಂಡು ಬೆದರಿಕೆ ಒಡ್ಡುವಂತೆ ಮಾತನಾಡಿದ್ದಾರೆ. ಪ್ರಾಣ ಬೆದರಿಕೆಯನ್ನೂ ಒಡ್ಡಿದ್ದಾರೆ ಎಂದು ಆರೋಪಿಸಿ ಖಾಸಗಿ ದೂರು ದಾಖಲಿಸಿದ್ದರು.

ಇದನ್ನೂ ಓದಿ – ಸಾಗರದಲ್ಲಿ ವಿದ್ಯಾರ್ಥಿಗಳ ದಿಢೀರ್‌ ಪ್ರತಿಭಟನೆ, ಶಾಸಕ ಬೇಳೂರು ಗೋಪಾಲಕೃಷ್ಣ ಫೋನ್‌ ಬಳಿಕ ಹೋರಾಟ ಅಂತ್ಯ

ವಿಚಾರಣೆ ನಡೆಸಿದ ನ್ಯಾಯಾಲಯ ಎಫ್‌ಐಆರ್‌ (FIR) ದಾಖಲಿಸುವಂತೆ ಸಾಗರ ಠಾಣೆಗೆ ಸೂಚಿಸಿದೆ. ಅದರಂತೆ ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment