ವಾಟ್ಸಪ್‌ ಬಳಸುವಾಗ ಹುಷಾರ್‌, ಶಿವಮೊಗ್ಗದ ಮಹಿಳೆ ಪೊಲೀಸ್‌ ಠಾಣೆ ಮೆಟ್ಟಿಲೇರುವಂತೆ ಮಾಡಿತು ಮೆಸೇಜ್‌, ಏನಿದು ಕೇಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 29 MAY 2023

SHIMOGA : ವ್ಯಾಪಾರದಲ್ಲಿ ಒಳ್ಳೆಯ ಲಾಭವಾಗಿದೆ. ಆದ್ದರಿಂದ ಬಂಗಾರ ಮತ್ತು ಹಣವನ್ನು ಗಿಫ್ಟ್‌ ‍(Gift) ರೂಪದಲ್ಲಿ ನಿಮ್ಮ ವಿಳಾಸಕ್ಕೆ ಕಳುಹಿಸುತ್ತೇನೆ ಎಂದು ನಂಬಿಸಿ ಶಿವಮೊಗ್ಗದ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ಹಣ ವಂಚಿಸಲಾಗಿದೆ.

Online-Fraud-In-Shimoga

ವಾಟ್ಸಪ್‌ನಲ್ಲಿ ಅನಾಮಧೇಯ ಮೆಸೇಜ್‌

ಶಿವಮೊಗ್ಗದ ಮಹಿಳೆಯೊಬ್ಬರಿಗೆ (ಹೆಸರು ಗೌಪ್ಯ) ಏ.8ರಂದ ಅನಾಮಧೇಯ ನಂಬರ್‌ ಒಂದರಿಂದ ವಾಟ್ಸಪ್‌ ಮೆಸೇಜ್‌ ಬಂದಿತ್ತು. ಬಳಿಕ ಮಹಿಳೆಯು ಮೆಸೇಜ್‌ ಮಾಡಿದ ವ್ಯಕ್ತಿಯನ್ನು ವಾಟ್ಸಪ್‌ ಮೂಲಕವೆ ಪರಿಚಯ ಮಾಡಿಕೊಂಡಿದ್ದಾರೆ. ಮೆಸೇಜ್‌ ಮಾಡಿದಾತ, ʼನನಗೆ ವ್ಯಾಪಾರದಲ್ಲಿ ದೊಡ್ಡ ಮಟ್ಟಿಗೆ ಲಾಭವಾಗಿದೆ. ನಿಮಗೆ ಹಣ ಮತ್ತು ಬಂಗಾರವನ್ನು ಗಿಫ್ಟ್‌ ಕಳುಹಿಸುತ್ತೇನೆ. ನಿಮ್ಮ ವಿಳಾಸಕ್ಕೆ ಗಿಫ್ಟ್‌ ತಲುಪಲಿದೆʼ ಎಂದು ತಿಳಿಸಿದ್ದ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಧಾನಿ ಮೋದಿಯನ್ನು ಟ್ಯಾಗ್‌ ಮಾಡಿ ಪ್ರಶ್ನಿಸಿದ ನೆಟ್ಟಿಗರು, ಏನೇನು ಪ್ರಶ್ನೆ ಕೇಳಿದ್ದಾರೆ?

ಕೊರಿಯರ್‌ ಏಜೆಂಟ್‌ನಿಂದ ಫೋನ್‌ ಕರೆ

ಏ.15ರಂದು ಮಹಿಳೆ ನಂಬರ್‌ಗೆ ಕರೆ ಮಾಡಿದ ವ್ಯಕ್ತಿಯೊಬ್ಬ ತಾನು ಕೊರಿಯರ್‌ ಏಜೆಂಟ್‌ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮಗೆ ಪಾರ್ಸಲ್‌ ಬಂದಿದೆ. ಇದನ್ನು ತಲುಪಿಸಬೇಕಿದ್ದರೆ ವಿವಿಧ ಚಾರ್ಜ್‌ಗಳಾಗಲಿವೆ ಎಂದು ತಿಳಿಸಿದ್ದಾನೆ. ಆತನ ಮಾತು ನಂಬಿದ ಮಹಿಳೆ ಕೇಳಿದಷ್ಟು ಹಣ ನೀಡಿದ್ದಾರೆ. ಫೋನ್‌ ಪೇ ಮತ್ತು ಎಟಿಎಂ ಮೂಲಕ ಒಟ್ಟು 3.59 ಲಕ್ಷ ರೂ. ಹಣವನ್ನು ತಲುಪಿಸಿದ್ದಾರೆ. ಪಾರ್ಸಲ್‌ ಬಾರದಿದ್ದಾಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

ಅನಾಮಧೇಯ ಮೆಸೇಜ್‌ಗೆ ಉತ್ತರಿಸಬೇಡಿ

ವಾಟ್ಸಪ್‌ನಲ್ಲಿ ಅನಾಮಧೇಯ ಮೆಸೇಜ್‌ಗಳಿಗೆ ಪ್ರತಿಕ್ರಿಯೆ ನೀಡುವ ಮುನ್ನ ಎಚ್ಚರ ವಹಿಸಬೇಕಿದೆ. ಗಿಫ್ಟ್‌ (Gift) ಕಳುಹಿಸುವುದು, ಉದ್ಯೋಗ ಕೊಡಿಸುವುದು ಸೇರಿ ನಾನಾ ಬಗೆಯಲ್ಲಿ ವಂಚನೆ ಮಾಡಲಾಗುತ್ತಿದೆ. ಗುರುತು ಪರಿಚಯವಿಲ್ಲದವರು ಉಡುಗೊರೆ ನೀಡಲು ಕಾರಣವೇನು? ಆಮಿಷಗಳಿಗೆ ಬಲಿಯಾದರೆ ವಂಚನೆಗೊಳಗಾಗಬೇಕಾಗುತ್ತದೆ. ಈ ಬಗ್ಗೆ ಜನರು ಜಾಗೃತ ವಹಿಸಬೇಕಿದೆ.

WATCH VIDEO

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 29, 2023

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment