ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 30 MAY 2023
SHIMOGA : ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಹೊಸನಗರ, ಸಾಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಸುರಿಯುತ್ತಿದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಮೋಡ ಕವಿದ ವಾತಾವರಣವಿದೆ.

ಸಾಗರ, ಆನಂದಪುರ, ಹೊಸನಗರ, ರಿಪ್ಪನ್‌ಪೇಟೆ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಮಳೆಯಾಗುತ್ತಿದೆ. ಸಿಡಿಲು, ಗುಡುಗು ಜೋರಾಗಿರುವುದರಿಂದ ಜನರು ಮನೆಯಿಂದ ಹೊರ ಬರಲು ಹೆದರುವಂತಾಗಿದೆ.
ಇದನ್ನೂ ಓದಿ – ಗಾಳಿ, ಮಳೆ ಹಿನ್ನೆಲೆ, ಸಿಟಿ ರೌಂಡ್ಸ್ ಆರಂಭಿಸಿದ ಶಿವಮೊಗ್ಗ ಎಂಎಲ್‌ಎ
ಶಿವಮೊಗ್ಗ ತಾಲೂಕಿನ ವಿವಿಧೆಡೆಯು ಮಳೆ ಸುರಿಯುತ್ತಿದೆ. ಆಯನೂರು, ಕುಂಸಿ, ಹಾರನಹಳ್ಳಿ ಭಾಗದಲ್ಲಿ ಮಳೆಯಾಗುತ್ತಿದೆ. ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ಮೋಡ ಕವಿದ ವಾತಾವರಣವಿದೆ.

ಸೋಮವಾರ ಶಿವಮೊಗ್ಗ ನಗರದ ವಿವಿಧೆಡೆ ಜೋರು ಗಾಳಿ ಸಹಿತ ಮಳೆಯಾಗಿದೆ. ಇದರಿಂದ ವಿವಿಧೆಡೆ ಮರಗಳು ಬುಡಮೇಲಾಗಿ ವಾಹನಗಳು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಹಲವು ಮನೆಗಳ ಮೇಲ್ಛಾವಣಿ ಹಾರಿ ಹೋಗಿವೆ. ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಸಿಡಿಲಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ತಗ್ಗಿದ ತಾಪಮಾನ
ಕಳೆದ ಕೆಲವು ದಿನದಿಂದ ಬಿಸಿಲಿನ ಅಬ್ಬರ ಜೋರಾಗಿತ್ತು. ತಪಮಾನ ಏರಿಕೆಯಾಗಿತ್ತು. ಮಳೆಯ ಅಬ್ಬರಕ್ಕೆ ತಾಪಮಾನದಲ್ಲಿ ಇಳಿಕೆಯಾಗಿದೆ. ಶಿವಮೊಗ್ಗದಲ್ಲಿ ಸದ್ಯ 25 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

About The Editor
ನಿತಿನ್ ಆರ್.ಕೈದೊಟ್ಲು
















