ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 30 MAY 2023
SHIMOGA : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಶಿವಮೊಗ್ಗ ಭೇಟಿ ರದ್ದಾಗಿದೆ (Cancelled). ಈ ಹಿನ್ನೆಲೆ ಮೇ 31ರಂದು ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳು, ಸಭೆಗಳನ್ನು ರದ್ದುಗೊಳಿಸಲಾಗಿದೆ.

ಸಚಿವರಾದ ಮೇಲೆ ಮಧು ಬಂಗಾರಪ್ಪ ಅವರು ಮೇ 31ರಂದು ಮೊದಲ ಬಾರಿ ಜಿಲ್ಲೆಗೆ ಆಗಮಿಸಬೇಕಿತ್ತು. ಹಾಗಾಗಿ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ, ಅಭಿನಂದನಾ ಸಮಾರಂಭ ಆಯೋಜಿಸಿದ್ದರು. ಇದಕ್ಕಾಗಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದವು.
ಇದನ್ನೂ ಓದಿ – ಶಿವಮೊಗ್ಗದಿಂದ ಬೆಂಗಳೂರಿಗೆ ಇನ್ನೂ 4 ಎಲೆಕ್ಟ್ರಿಕ್ ಬಸ್ ಸೇವೆ ಆರಂಭ, ಯಾವ್ಯಾವ ಬಸ್ಸಿನ ಟೈಮಿಂಗ್ ಏನು?
ಶಾಲೆಗಳು ಪುನಾರಂಭ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಮಲವಗೊಪ್ಪದ ಸರ್ಕಾರಿ ಶಾಲೆಗೆ ಭೇಟಿ ನೀಡಬೇಕಿತ್ತು. ಮಧ್ಯಾಹ್ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಅನೌಪಚಾರಿಕ ಸಭೆ ಆಯೋಜಿಸಲಾಗಿತ್ತು. ಈಗ ಪ್ರವಾಸ ರದ್ದಾಗಿರುವುದರಿಂದ ಎಲ್ಲ ಕಾರ್ಯಕ್ರಮಗಳು ರದ್ದಾಗಿದೆ (Cancelled).

ತುರ್ತು ಮೀಟಿಂಗ್, ಸಂಪುಟ ಸಭೆ
ವಿಧಾನಸಭೆ ಚನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿ ಭರವಸೆಗಳ ಈಡೇರಿಕೆ ಸಂಬಂಧ ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಇದರ ಪೂರ್ವಭಾವಿಯಾಗಿ ಹಲವು ಸಭೆಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರ ಶಿವಮೊಗ್ಗ ಭೇಟಿ ರದ್ದಾಗಿದೆ ಎಂದು ತಿಳಿದು ಬಂದಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





