ಶಿವಮೊಗ್ಗದ ಮಹಿಳೆಗೆ ಇಂಗ್ಲೆಂಡ್‌ನಿಂದ ಫ್ರೆಂಡ್‌ ರಿಕ್ವೆಸ್ಟ್‌, ಏರ್‌ಪೋರ್ಟ್‌ನಿಂದ ಫೋನ್‌, ಕೊನೆಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 31 MAY 2023

SHIMOGA : ಇಂಗ್ಲೆಂಡ್‌ ದೇಶದಲ್ಲಿ ಡಾಕ್ಟರ್‌ (Doctor) ಎಂದು ನಂಬಿಸಿ ಫೇಸ್‌ಬುಕ್‌ನಲ್ಲಿ ಮಹಿಳೆಯೊಬ್ಬರ ಜೊತೆಗೆ ಚಾಟಿಂಗ್‌ ಮಾಡಿ, ಲಕ್ಷಾಂತರ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Online-Fraud-In-Shimoga

ಏನಿದು ಪ್ರಕರಣ?

ಶಿವಮೊಗ್ಗದ ಮಹಿಳೆಯೊಬ್ಬರ (ಹೆಸರು ಗೌಪ್ಯ) ಫೇಸ್‌ಬುಕ್‌ಗೆ ವ್ಯಕ್ತಿಯೊಬ್ಬನ ಫ್ರೆಂಡ್‌ ರಿಕ್ವೆಸ್ಟ್‌ ಬಂದಿತ್ತು. ರಿಕ್ವೆಸ್ಟ್‌ ಅಕ್ಸಪ್ಟ್‌ ಮಾಡಿ ಸ್ವಲ್ಪ ದಿನ ಆ ವ್ಯಕ್ತಿ ಜೊತೆ ಮಹಿಳೆ ಚಾಟಿಂಗ್‌ ನಡೆಸಿದ್ದರು. ತಾನೊಬ್ಬ ವೈದ್ಯ (Doctor). ಇಂಗ್ಲೆಂಡ್‌ ದೇಶದಲ್ಲಿ ವಾಸ ಎಂದು ತನ್ನನ್ನು ಪರಿಚಯಿಸಿಕೊಂಡಿದ್ದ. ಮೇ 14ರಂದು ಚಾಟಿಂಗ್‌ ವೇಳೆ, ಬೆಲೆಬಾಳುವ ಬಂಗಾರದ ಉಡುಗೊರೆ ಕಳುಹಿಸುವುದಾಗಿ ಆತ ತಿಳಿಸಿದ್ದ.

ಇದನ್ನೂ ಓದಿ – ಜನ ಶತಾಬ್ದಿ ರೈಲು 3 ಗಂಟೆ ಲೇಟ್‌, ರಾತ್ರಿ ಬದಲು ಮಧ್ಯರಾತ್ರಿ ಶಿವಮೊಗ್ಗ ತಲುಪಿದ ಟ್ರೈನ್‌, ಪ್ರಯಾಣಿಕರು ಹೈರಾಣು

ಏರ್‌ಪೋರ್ಟ್‌ನಿಂದ ಫೋನ್‌..!

ಮೇ 16ರಂದು ಮಹಿಳೆಯ ಮೊಬೈಲ್‌ ನಂಬರ್‌ಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ, ತಾನು ಏರ್‌ಪೋರ್ಟ್‌ ಅಧಿಕಾರಿ ಎಂದು ತಿಳಿಸಿದ್ದ. ನಿಮಗೆ ಕೊರಿಯರ್‌ ಬಂದಿದ್ದು ಅದಕ್ಕೆ ಚಾರ್ಜಸ್‌ ತಗುಲಲಿದೆ ಎಂದು ತಿಳಿಸಿದ್ದ. ಇದನ್ನು ನಂಬಿದ ಮಹಿಳೆ ಮೇ 16 ರಿಂದ 20ರವರೆಗೆ ವಿವಿಧ ಹಂತದಲ್ಲಿ ಹಣ ವರ್ಗಾಯಿಸಿದ್ದರು. ಒಟು 6.50 ಲಕ್ಷ ರೂ. ಹಣ ವರ್ಗಾಯಿಸಿದ್ದಾರೆ. ಆ ಬಳಿಕ ವೈದ್ಯ ಮತ್ತು ಏರ್‌ಪೋರ್ಟ್‌ ಅಧಿಕಾರಿ ಸೋಗಿನಲ್ಲಿ ಚಾಟಿಂಗ್‌ ಮತ್ತು ಫೋನ್‌ ಮೂಲಕ ಮಾತನಾಡಿದವರು ಸಂಪರ್ಕಕ್ಕೆ ಸಿಗಲಿಲ್ಲ.

ವಂಚನೆಗೊಳಗಾಗಿರುವುದು ಗೊತ್ತಾಗುತ್ತಿದ್ದಂತೆ ಮಹಿಳೆ ಶಿವಮೊಗ್ಗದ ಸಿಇಎನ್‌ ಠಾಣೆಗೆ ದೂರು ನೀಡಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2023

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

Leave a Comment